ದೇಶ

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ರತನ್ ಟಾಟಾ, ಮಾಜಿ ರಕ್ಷಣಾ ಕಾರ್ಯದರ್ಶಿ ವಿಚಾರಣೆಗೆ ಸ್ವಾಮಿ ಆಗ್ರಹ

ಹಗರಣದ ತನಿಖೆಯಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಹಾಗೂ ಟಾಟಾ ಸನ್ಸ್ ನ ಹಂಗಾಮಿ ಅಧ್ಯಕ್ಷ ರತನ್ ಟಾಟಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣ: ರತನ್ ಟಾಟಾ, ಮಾಜಿ ರಕ್ಷಣಾ ಕಾರ್ಯದರ್ಶಿ ವಿಚಾರಣೆಗೆ ಸ್ವಾಮಿ ಆಗ್ರಹ
ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ
Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಪತ್ರ ಬರೆದಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಹಗರಣದ ತನಿಖೆಯಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಹಾಗೂ ಟಾಟಾ ಸನ್ಸ್ ನ ಹಂಗಾಮಿ ಅಧ್ಯಕ್ಷ ರತನ್ ಟಾಟಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. 
ಎಎನ್ಐ ವರದಿಯ ಪ್ರಕಾರ ಸಿಬಿಐ ಗೆ ಪತ್ರ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ರತನ್ ಟಾಟಾ, ವಿಜಯ್ ಸಿಂಗ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ರತನ್ ಟಾಟಾ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್ ಸಿಂಗ್ ಅವರನ್ನು ಟಾಟಾ ಟ್ರಸ್ಟ್ ಮಂಡಳಿಗೆ ನೇಮಕ ಮಾಡಿದ್ದು ಅಕ್ರಮ ಎಂದು ಆರೋಪಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ರತನ್ ಟಾಟಾ ಇಟಾಲಿಗೆ ಹೋಗಿ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದ ವಿಚಾರಣೆ ಎದುರಿಸಿ ಹೇಳಿಕೆ ನೀಡಿದ್ದರು. ಇದೇ ಆಧಾರದಲ್ಲಿ ರತನ್ ಟಾಟಾ ಅವರ ವಿಚಾರಣೆ ನಡೆಸುವ ಅಗತ್ಯವಿದೆ, ಇಟಾಲಿಯಿಂದ ಬಂದ ಸಮನ್ಸ್ ಗೆ ರತನ್ ಟಾಟಾ ಉತ್ತರಿಸುತ್ತಾರೆ ಎನ್ನುವುದಾದರೆ ಭಾರತದಲ್ಲಿಯೂ ಅವರು ವಿಚಾರಣೆ ಎದುರಿಸಬೇಕು ಎಂದು ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.