ದೇಶ

ಹಿಂದಿ ಭಾಷೆಯನ್ನು ವಿಶ್ವಸಂಸ್ಥೆಯಲ್ಲಿ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ: ಕೇಂದ್ರ

ಹಿಂದಿ ಭಾಷೆಯನ್ನು ಜನಪ್ರಿಯಗೊಳಿಸಲು ಹಾಗೂ ವಿಶ್ವಸಂಸ್ಥೆಯ ಭಾಷೆಗಳಲ್ಲಿ ಹಿಂದಿ ಭಾಷೆಯನ್ನು ಸೇರ್ಪಡೆಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ...

ಹಿಂದಿ ಭಾಷೆಯನ್ನು ವಿಶ್ವಸಂಸ್ಥೆಯಲ್ಲಿ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ: ಕೇಂದ್ರ
ವಿದೇಶಾಂಗ ಸಚಿವಾಲಯದ ಸಚಿವೆ ಸುಷ್ಮಾ ಸ್ವರಾಜ್
Published On :

ನವದೆಹಲಿ: ಹಿಂದಿ ಭಾಷೆಯನ್ನು ಜನಪ್ರಿಯಗೊಳಿಸಲು ಹಾಗೂ ವಿಶ್ವಸಂಸ್ಥೆಯ ಭಾಷೆಗಳಲ್ಲಿ ಹಿಂದಿ ಭಾಷೆಯನ್ನು ಸೇರ್ಪಡೆಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.

ಈ ಕುರಿತಂತೆ ವಿದೇಶಾಂಗ ಸಚಿವಾಲಯದ ಸಚಿವೆ ಸುಷ್ಮಾ ಸ್ವರಾಜ್ ಅವರು ಬರವಣಿಗೆ ಮೂಲಕ ಲೋಕಸಭೆಗೆ ತಿಳಿಸಿದ್ದು, ಹಿಂದಿ ಭಾಷೆಯನ್ನು ವಿಶ್ವದಾದ್ಯಂತ ಜನಪ್ರಿಯಗೊಳಿಸಲು ಸರ್ಕಾರ ಸತತ ಯತ್ನಗಳನ್ನು ನಡೆಸುತ್ತಿದ್ದು, ವಿಶ್ವಸಂಸ್ಥೆಯ ಭಾಷೆಗಳಲ್ಲಿ ಸೇರ್ಪಡೆಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪರಿಶ್ರಮದ ಫಲದಂತೆ ವಿಶ್ವಸಂಸ್ಥೆಯ ರೇಡಿಯೋ ಸ್ಟೇಷನ್ ನಲ್ಲಿ ಈಗಾಗಲೇ ಹಿಂದಿ ಭಾಷೆಯ ಕಾರ್ಯಕ್ರಮಗಳು ಪ್ರಸಾರವಾಗುತ್ತಿದೆ. ಇದಲ್ಲದೆ, ಭಾರತೀಯ ನಾಯಕರು ವಿಶ್ವಸಂಸ್ಥೆಯಲ್ಲಿ ನೀಡುವ ಹೇಳಿಕೆಯನ್ನು ಹಿಂದಿ ಭಾಷೆಯಲ್ಲಿ ನೀಡಿದ್ದಾರೆ. ಇದು ಹಿಂದಿಯನ್ನು ಅಂತರಾಷ್ಟ್ರೀಯ ಭಾಷೆಯಾಗಿಸಲು ಇದು ಉತ್ತೇಜನ ನೀಡಿದಂತಾಗಿದೆ. 2007 ಜುಲೈನ ವರೆಗೂ ನ್ಯೂಯಾರ್ಕ್ ನಗರದಲ್ಲಿ 8ನೇ ವಲ್ಡ್ ಹಿಂದಿ ಕಾನ್ಪರೆನ್ಸ್ ನ್ನು ಆಯೋಜಿಸಲಾಗಿತ್ತು. ವಿಶ್ವಸಂಸ್ಥೆಯ ಪ್ರಧಾನಿ ಕಚೇರಿಯಲ್ಲಿಯೇ ಈ ಕಾನ್ಪರೆನ್ಸ್ ಗೆ ಚಾಲನೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇತ್ತೀಚೆಗೆಷ್ಟೇ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಸುಷ್ಮಾ ಸ್ವರಾಜ್ ಅವರು ವೇಗವಾಗಿ ಗುಣಮುಖರಾಗುತ್ತಿದ್ದು, ಅವರನ್ನು ಆಸ್ಪತ್ರೆಯಿಂದ ಕಳುಹಿಸಲು ಕನಿಷ್ಠ ಒಂದು ವಾರವಾದರೂ ಅಗತ್ಯವಿದೆ. ಅವರ ಸ್ಥಿತಿಯನ್ನು ನಮ್ಮ ವೈದ್ಯ ಸಮೂಹ ಪರಿಶೀಲಿಸುತ್ತಿದೆ" ಎಂದು ವೈದ್ಯಾಧಿಕಾರಿಗಳು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.