ಕಾಶ್ಮೀರದಲ್ಲಿ ಉಗ್ರನ ಹತ್ಯೆ: ಭುಗಿಲೆದ್ದ ಪ್ರತಿಭಟನೆ
ಡಿ.14 ರಂದು ನಡೆದ ಉಗ್ರನ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

Published On :
ಶ್ರೀನಗರ: ಡಿ.14 ರಂದು ನಡೆದ ಉಗ್ರನ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ ಬೆಹರಾ ದಲ್ಲಿ ಬುಧವಾರ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಭದ್ರತಾ ಪಡೆಯ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಯಾದ ಉಗ್ರನಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು ಉಗ್ರರು ಅಡಗಿ ಕುಳಿತಿರುವ ಮಾಹಿತಿಯನ್ನು ಆಧರಿಸಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಸಿತ್ ರಸೂಲ್ ಹತ್ಯೆಗೀಡಾಗಿರುವ ಉಗ್ರನಾಗಿದ್ದು, ಭಯೋತ್ಪಾದನೆಗೆ ಸೇರುವ ಮೊದಲು ಇಸ್ಲಾಮಿಕ್ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಬಿ.ಟೆಕ್ ವಿದ್ಯಾರ್ಥಿಯಾಗಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


