ದೇಶ

ನಿಷ್ಪ್ರಯೋಜಕ ಹೇಳಿಕೆ ನೀಡುವುದು ರಾಹುಲ್'ಗೆ ಚಟವಾಗಿ ಹೋಗಿದೆ: ರವಿ ಶಂಕರ್ ಪ್ರಸಾದ್

ನಿಷ್ಪ್ರಯೋಜಕ ಹೇಳಿಕೆ ನೀಡುವುದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಚಟವಾಗಿ ಹೋಗಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್ ಅವರು...

ನಿಷ್ಪ್ರಯೋಜಕ ಹೇಳಿಕೆ ನೀಡುವುದು ರಾಹುಲ್'ಗೆ ಚಟವಾಗಿ ಹೋಗಿದೆ: ರವಿ ಶಂಕರ್ ಪ್ರಸಾದ್
ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್
Published On :

ನವದೆಹಲಿ: ನಿಷ್ಪ್ರಯೋಜಕ ಹೇಳಿಕೆ ನೀಡುವುದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಚಟವಾಗಿ ಹೋಗಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ಸಚಿವ ರವಿ ಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಯವರು ನೋಟು ನಿಷೇಧ ಕುರಿತಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ದುಬಾರಿ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಡವರ ವಿರುದ್ಧ ಸಮರ ಸಾರಿದ್ದಾರೆಂದು ಹೇಳಿದ್ದರು.

ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರವಿ ಶಂಕರ್ ಪ್ರಸಾದ್ ಅವರು, ರಾಹುಲ್ ಗಾಂಧಿಯವರಿಗೆ ನಿಷ್ಪ್ರಯೋಜಕ ಹೇಳಿಕೆಗಳನ್ನು ನೀಡುವುದು ಇತ್ತೀಚೆಗೆ ಅಭ್ಯಾಸವಾಗಿ ಹೋಗಿದೆ. ಕೆಲವೊಮ್ಮೆ ಭೂಕಂಪದ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವೊಮ್ಮೆ ಮತ್ತಿತರ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಹುಲ್ ಅವರ ಸಂಕಟ ನನಗೆ ಅರ್ಥವಾಗುತ್ತದೆ. ಆದರೆ, ದೇಶದ ಜನತೆ ಕೇಂದ್ರ ಸರ್ಕಾರದ ಪರವಾಗಿ ನಿಂತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದಾರೆ. ಕಪ್ಪುಹಣ ಇಟ್ಟುಕೊಂಡವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ತನಿಖೆಗಾಗಿ ಟ್ವಿಟರ್ ಖಾತೆಯ ಲಾಗಿನ್ ಮಾಹಿತಿಗಳನ್ನು ನೀಡುವಂತೆ ಕೇಳಲಾಗಿತ್ತು. ಆದರೆ, ಅವರ ಕಡೆಯಿಂದ ಯಾವುದೇ ಸಹಕಾರಗಳು ಬರಲಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.