ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ವರ್ಷದ ಅತಿ ದೊಡ್ಡ ಜೋಕ್: ಕಿರೆಣ್ ರಿಜಿಜು
ಪ್ರಧಾನಿ ಮೋದಿ ಅವರ ವಿರುದ್ದ ನಾನು ಮಾತನಾಡುತ್ತೇನೆ ಎಂಬ ಭಯದಿಂದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂಬ ರಾಹು...

ನವದೆಹಲಿ: ಪ್ರಧಾನಿ ಮೋದಿ ಅವರ ವಿರುದ್ದ ನಾನು ಮಾತನಾಡುತ್ತೇನೆ ಎಂಬ ಭಯದಿಂದ ನನಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಕೊಡುತ್ತಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆ ವರ್ಷದ ಅತಿ ದೊಡ್ಡ ಜೋಕ್ ಎಂದು ಕೇಂದ್ರ ಸಚಿವ ಕಿರೆಣ್ ರಿಜಿಜು ಹೇಳಿದ್ದಾರೆ.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಉಪಾಧ್ಯಕ್ಷರಾಗಿ ಇಂಥ ಹೇಳಿಕೆಗಳನ್ನು ನೀಡುತ್ತಿದ್ದು, ಅವರನ್ನು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಹೆದರುತ್ತಿದೆ ಎಂದು ಟೀಕಿಸಿದ್ದಾರೆ.
ತಾವು ಸಂಸತ್ತಿನಲ್ಲಿ ಭಾಷಣ ಮಾಡಿದರೇ ಭೂಕಂಪವಾಗುತ್ತದೆ. ಹೀಗಾಗಿ ನಾನು ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ, ಒಂದು ವೇಳೆ ಅವರು ಸಂಸತ್ತಿನಲ್ಲಿ ಮಾತನಾಡಿದರೇ ಭೂಕಂಪವಿರಲಿ, ಬಲೂನ್ ಕೂಡ ಸ್ಪೋಟಿಸುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಯಾರೋಬ್ಬರು ರಾಹುಲ್ ಗಾಂಧಿ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ನನಗೆ ಅನ್ನಿಸುತ್ತದೆ ಎಂದು ಕಿರೆಣ್ ರಿಜಿಜು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


