ದೇಶ

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ...

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚಲು ಸುಪ್ರೀಂ ಕೋರ್ಟ್ ಆದೇಶ
ಸುಪ್ರೀಂ ಕೋರ್ಟ್
Published On :
ನವದೆಹಲಿ: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿದೆ. ಈಗಿರುವ ಮದ್ಯದಂಗಡಿಗಳ ಅನುಮತಿ ಅವಧಿ ಮುಗಿಯುವವರೆಗೆ ಅವುಗಳನ್ನು ನಡೆಸಿಕೊಂಡು ಹೋಗಬಹುದು. ಆ ನಂತರ ಅನುಮತಿ ನವೀಕರಿಸುವಂತಿಲ್ಲ ಎಂದು ಕೂಡ ಸುಪ್ರೀಂ ಕೋರ್ಟ್ ಹೇಳಿದೆ.
ಹೆದ್ದಾರಿಗಳಲ್ಲಿನ ಮದ್ಯದ ಅಂಗಡಿಗಳನ್ನು ಮುಚ್ಚಲು ಮುಂದಿನ ವರ್ಷ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಕೇವಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಾತ್ರವಲ್ಲದೆ ಅದರ 500 ಮೀಟರ್ ಸುತ್ತಮುತ್ತಲ ಪ್ರದೇಶಗಳಲ್ಲಿ ಕೂಡ ಮದ್ಯದ ಅಂಗಡಿಗಳಿದ್ದರೆ ಅವುಗಳನ್ನು ಮುಚ್ಚಬೇಕು ಎಂದು ಹೇಳಿದೆ.
ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮುಖ್ಯಸ್ಥರು ಸ್ಥಳೀಯ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆಯ ಜಾರಿಗೆ ಮುಂದಾಗಬೇಕೆಂದು ನ್ಯಾಯಾಲಯ ಹೇಳಿದೆ.
ಹೆದ್ದಾರಿಗಳಲ್ಲಿ ಮದ್ಯದ ಅಂಗಡಿಗಳಿರುವುದರಿಂದ ವಾಹನ ಚಾಲಕರು ಮದ್ಯ ಸೇವಿಸಿ ಅಪಘಾತವುಂಟಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಕೋರ್ಟ್ ಈ ಆದೇಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.