ದೇಶ

ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಎಲ್.ಕೆ. ಅಡ್ವಾಣಿ ತೀವ್ರ ಅಸಮಾಧಾನ

ದುಬಾರಿ ನೋಟು ಮೇಲಿನ ನಿಷೇಧ ಕುರಿತಂತೆ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿಯವರು ಗುರುವಾರ ತೀವ್ರ ಅಸಮಾಧಾನವನ್ನು...

ಸಂಸತ್ತಿನಲ್ಲಿ ಮುಂದುವರೆದ ಗದ್ದಲ: ಎಲ್.ಕೆ. ಅಡ್ವಾಣಿ ತೀವ್ರ ಅಸಮಾಧಾನ
ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ
Published On :

ನವದೆಹಲಿ: ದುಬಾರಿ ನೋಟು ಮೇಲಿನ ನಿಷೇಧ ಕುರಿತಂತೆ ಲೋಕಸಭೆ ಹಾಗೂ ರಾಜ್ಯಸಭೆಗಳಲ್ಲಿ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿಯವರು ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವೆಂಬರ್ 16 ರಿಂದ ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಅಧಿವೇಶನ ಆರಂಭವಾದಾಗಿನಿಂದಲೂ ಸಂಸತ್ತು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದಿರುವುದಕ್ಕೆ ಅಡ್ವಾಣಿ ಅವರು ತಮ್ಮ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಇದ್ರೀಸ್ ಅಲಿ ಹೇಳಿದ್ದಾರೆ.

ಯಾರು ಗೆಲ್ಲಲಿ, ಬಿಡಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳಿಂದ ಪ್ರತಿಯೊಬ್ಬರಿಗೂ ಸೋಲನ್ನು ಎದುರಾಗಿದೆ. ಸ್ಪೀಕರ್ ಜೊತೆ ಮಾತನಾಡಿ ಏನೇ ಆದರೂ ನಾಳೆ ಕಲಾಪ ಸುಗಮವಾಗಿ ಸಾಗುವಂತೆ ಮಾಡಬೇಕು. ಸಂಸತ್ತಿನ ಬೆಳವಣಿಗೆಗಳನ್ನು ನೋಡುತ್ತಿದ್ದರೆ, ಲೋಕಸಭೆಗೆ ರಾಜೀನಾಮೆ ಸಲ್ಲಿಸಬೇಕೆಂಬ ಭಾವನೆ ನನ್ನಲ್ಲಿ ಮೂಡುತ್ತಿದೆ. ಒಂದು ವೇಳೆ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್ತಿನಲ್ಲಿ ಇದ್ದಿದ್ದರೆ, ಅವರೂ ಕೂಡ ಬೇಸರ ವ್ಯಕ್ತಪಡಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆಂದು ಇದ್ರೀಸ್ ಅಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.