ಪ.ಬಂಗಾಳ: ಹೌರಾ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಆಕಸ್ಮಿಕ; 6 ಅಗ್ನಿಶಾಮಕ ವಾಹನಗಳ ದೌಡು
ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಕೋಲ್ಕತಾ: ಕೋಲ್ಕತಾದಲ್ಲಿರುವ ಅತ್ಯಂತ ಹಳೆಯ ರೈಲ್ವೇ ನಿಲ್ದಾಣ ಎಂಬ ಖ್ಯಾತಿಗಳಿಸಿರುವ ಹೌರಾ ರೈಲ್ವೇ ನಿಲ್ದಾಣದಲ್ಲಿ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.
ಹೌರಾ ನಿಲ್ದಾಣದ ಹಳೆಯ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತಲಿದ್ದ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ. ನಿಲ್ದಾಣದ ಫುಡ್ ಫ್ಲಾಜಾ ಸಂಕೀರ್ಣದಲ್ಲಿ ಮೊದಲು ಬೆಂಕಿ ಹೊತ್ತಿಕೊಂಡಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಈ ವರೆಗೂ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರ ಅಥವಾ ಗಾಯಗೊಂಡವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಆದರೂ ಸ್ಥಳಕ್ಕಾಗಮಿಸಿರುವ ರೈಲ್ವೇ ಪೊಲೀಸರು ಘಟನೆ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


