ಶ್ವಾಸಕೋಶ ಸೋಂಕು: ಮತ್ತೆ ಆಸ್ಪತ್ರೆಗೆ ದಾಖಲಾದ ಕರುಣಾನಿಧಿ
ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಗುರುವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ...

ಚೆನ್ನೈ: ಡಿಎಂಕೆ ಪಕ್ಷದ ಮುಖ್ಯಸ್ಥ ಎಂ. ಕರುಣಾನಿಧಿಯವರು ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಗುರುವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಕರುಣಾನಿಧಿಯವರಿಗೆ ಶ್ವಾಸಕೋಶ ಸೋಂಕು ಉಂಟಾಗಿದ್ದು, ಅಜೀರ್ಣ ಹಾಗೂ ಶೀತದಿಂದ ಬಳಲುತ್ತಿದ್ದರು. ಪರಿಣಾಮ ಉಸಿರಾಟಕ್ಕೆ ತೊಂದರೆಯುಂಟಾದ ಕಾರಣ ಆಸ್ಪತ್ರೆಗೆ ಮರುದಾಖಲಾಗಿದ್ದಾರೆಂದು ಹೇಳಲಾಗುತ್ತಿದೆ.
ಕರುಣಾನಿಧಿ ಅವರು ಆಸ್ಪತ್ರೆಗೆ ಮರುದಾಖಲಾಗಿರುವ ಕುರಿತಂತೆ ಆಸ್ಪತ್ರೆಯ ವೈದ್ಯರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕರುಣಾ ನಿಧಿಯವರಿಗೆ ಶ್ವಾಸಕೋಶ ಸೋಂಕು ಎದುರಾಗಿದ್ದು, ಪರಿಣಾಮ ಉಸಿರಾಟಕ್ಕೆ ಸಮಸ್ಯೆಯುಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ಮರುದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಹೇಳಿದ್ದಾರೆ.
ಕೆಲದಿನಗಳ ಹಿಂದಷ್ಟೇ ನಿರ್ಜಲೀಕರಣದಿಂದ ಬಳಲುತ್ತಿದ್ದ ಕರುಣಾನಿಧಿಯವರು ಡಿಸೆಂಬರ್ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಸುಧಾರಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


