ದೇಶ

ಸಾಕ್ಷ್ಯವಿದ್ದೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡದಿದ್ದರೆ 3 ವರ್ಷ ಜೈಲು: ಸುಬ್ರಮಣಿಯನ್ ಸ್ವಾಮಿ

ಸಾಕ್ಷ್ಯಾಧಾರವಿದ್ದೂ ನ್ಯಾಯಾಲಕ್ಕೆ ಅಥವಾ ಪೊಲೀಸರಿಗೆ ಸಲ್ಲಿಕೆ ಮಾಡದಿರುವುದೂ ಕೂಡ ಅಪರಾಧವಾಗಿದ್ದು, ಇಂತಹ ಅಪರಾಧಕ್ಕೆ ಮೂರು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು...

ಸಾಕ್ಷ್ಯವಿದ್ದೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡದಿದ್ದರೆ 3 ವರ್ಷ ಜೈಲು: ಸುಬ್ರಮಣಿಯನ್ ಸ್ವಾಮಿ
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ
Published On :

ನವದೆಹಲಿ: ಸಾಕ್ಷ್ಯಾಧಾರವಿದ್ದೂ ನ್ಯಾಯಾಲಕ್ಕೆ ಅಥವಾ ಪೊಲೀಸರಿಗೆ ಸಲ್ಲಿಕೆ ಮಾಡದಿರುವುದೂ ಕೂಡ ಅಪರಾಧವಾಗಿದ್ದು, ಇಂತಹ ಅಪರಾಧಕ್ಕೆ ಮೂರು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದರು. ಪ್ರಧಾನಿ ಮೋದಿಯವರು ಖುದ್ದು ಭ್ರಷ್ಟರಾಗಿದ್ದು, ಅವರ ವಿರುದ್ಧ ಸಾಕ್ಷ್ಯಾಧಾರಗಳು ನನ್ನ ಬಳಿಯಿದೆ. ಸಂಸತ್ತಿನಲ್ಲಿ ಮಾತನಾಡಲು ಅವಕಾಶ ದೊರತಿದ್ದೇ ಆದರೆ, ಬಹಿರಂಗ ಪಡಿಸುತ್ತೇನೆಂದು ಹೇಳಿದ್ದರು.

ಈ ಹೇಳಿಕೆಗೆ ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸುಬ್ರಮಣಿಯನ್ ಸ್ವಾಮಿ ಅವರು, ರಾಹುಲ್ ಗಾಂಧಿಯವರು ಕಾನೂನಿನ ಚೌಕಟ್ಟಿನ ಒಳಗಿದ್ದು, ಕಾನೂನನ್ನು ಪಾಲನೆ ಮಾಡಬೇಕಿದೆ. ಪ್ರಧಾನಿ ಮೋದಿ ವಿರುದ್ಧ ಸಾಕ್ಷ್ಯಾಧಾರಗಳಿದ್ದುಕೊಂಡು, ನ್ಯಾಯಾಲಯಕ್ಕೆ ಹಾಗೂ ಪೊಲೀಸರಿಗೆ ಸಲ್ಲಿಕೆ ಮಾಡದಿರುವುದೂ ಕೂಡ ಅಪರಾಧವಾಗಿದ್ದು, ಈ ಅಪರಾಧಕ್ಕೆ ಮೂರು ವರ್ಷ ಶಿಕ್ಷೆಯಾಗಬಹುದು ಎಂದು ಹೇಳಿದ್ದಾರೆ.

ಇದೇ ವೇಳೆ ಸಂಸತ್ತು ಗದ್ದಲ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರ್ಕಾರ ಮೃದು ಧೋರಣೆಯನ್ನು ಅನುಸರಿಸುತ್ತಿದೆ. ಗದ್ದಲವುಂಟು ಮಾಡುವ ನಾಯಕರನ್ನು ಮಾರ್ಷಲ್ ಗಳನ್ನು ಕರೆದು ಸಂಸತ್ತಿನಿಂದ ಹೊರಗೆ ಹಾಕಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.