ದೇಶ

ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನೋಟು ಬ್ಯಾನ್ ಗದ್ದಲಕ್ಕೆ ಚಳಿಗಾಲದ ಸಂಸತ್ ಅಧಿವೇಶನ ಬಲಿ

ಸಂಸತ್ ನ ಚಳಿಗಾಲದ ಕೊನೆಯ ದಿನದ ಅಧಿವೇಶನವೂ ಸಹ ವಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದು ಸಂಸತ್ ನ ಅಧಿವೇಶನ ಬಹುತೇಕ ವ್ಯರ್ಥವಾಗಿದೆ.

ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ನೋಟು ಬ್ಯಾನ್ ಗದ್ದಲಕ್ಕೆ ಚಳಿಗಾಲದ ಸಂಸತ್ ಅಧಿವೇಶನ ಬಲಿ
ಸಂಸತ್ ಅಧಿವೇಶನ
Published On :
ನವದೆಹಲಿ: ಸಂಸತ್ ನ ಚಳಿಗಾಲದ ಕೊನೆಯ ದಿನದ ಅಧಿವೇಶನವೂ ಸಹ ವಿಪಕ್ಷಗಳ ಗದ್ದಲಕ್ಕೆ ಬಲಿಯಾಗಿದ್ದು ಸಂಸತ್ ನ ಅಧಿವೇಶನ ಬಹುತೇಕ ವ್ಯರ್ಥವಾಗಿದೆ. 
ನೋಟು ನಿಷೇಧದ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ರಾಜ್ಯಸಭೆಯಲ್ಲಿ ಡಿ.16 ರಂದೂ ಸಹ ಗದ್ದಲ ಉಂಟು ಮಾಡಿದ್ದರ ಪರಿಣಾಮವಾಗಿ ರಾಜ್ಯಸಭೆಯ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮೇಲ್ಮನೆಯ ನಿಯಮಗಳನ್ನು ಗಾಳಿಗೆ ತೂರಿ, ಘೋಷಣೆ ಕೂಗುವುದು ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಗಿದ್ದು, ಅಧಿವೇಶನ ವ್ಯರ್ಥಗೊಂಡಿದೆ ಎಂದು ರಾಜ್ಯಸಭೆಯ ಅಧ್ಯಕ್ಷ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಬೇಸರ ವ್ಯಕ್ತಪಡಿಸಿದ್ದಾರೆ.  
ಇದೇ ವೇಳೆ ಕಾಂಗ್ರೆಸ್ ನ ಸಂಸದೀಯ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕಾಂಗ್ರೆಸ್ ನಿಯೋಗ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದು, ನೋಟು ನಿಷೇಧ ಕ್ರಮವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಅಹವಾಲು ನೀಡಿದ್ದಾರೆ. ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್ ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ನೋಟು ನಿಷೇಧ ಕ್ರಮದಿಂದ ಜನಸಾಮಾನ್ಯರಿಗೆ ಉಂಟಾಗಿರುವ ಸಮಸ್ಯೆಯನ್ನು ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ ಎಂದು ಹೇಳಿದ್ದಾರೆ. 
" ನೋಟು ನಿಷೇಧದಿಂದ ಜನರು ಸಾವನ್ನಪ್ಪಿರುವುದರ ಬಗ್ಗೆ ಹಾಗೂ ಜನಸಾಮಾನ್ಯರು ಎದುರಿಸಿದ ಸಂಕಷ್ಟದ ಬಗ್ಗೆ ಸಂಸತ್ ನ ಅಧಿವೇಶನದಲ್ಲಿ ಚರ್ಚಿಸಲು ಬಯಸಿದ್ದೆವು. ಆದರೆ ಕೇಂದ್ರ ಸರ್ಕಾರ ಚರ್ಚೆಗೆ ಅವಕಾಶ ನೀಡಲಿಲ್ಲ. ಈ ಬಗ್ಗೆ ಎಲ್ಲವನ್ನೂ ರಾಷ್ಟ್ರಪತಿಗಳಿಗೆ ವಿವರಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.