ಹಿಮಾಚಲಪ್ರದೇಶ: ಐಎಸ್ಐಎಸ್ ನಂಟು ಆರೋಪದ ಮೇಲೆ ಬೆಂಗಳೂರ ವ್ಯಕ್ತಿ ಬಂಧನ
ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ...

Published On :
ಶಿಮ್ಲಾ: ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಬಂಜಾರ ಪ್ರದೇಶದಲ್ಲಿ ಬೆಂಗಳೂರು ಮೂಲದ 23 ವರ್ಷದ ವ್ಯಕ್ತಿಯನ್ನು ಶನಿವಾರ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು, ಕಳೆದ ನಾಲ್ಕೈದು ತಿಂಗಳಿಂದ ನಕಲಿ ಗುರುತಿನ ಮೇಲೆ ಚರ್ಚ್ ವೊಂದರಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎನ್ಐಎ ಅಧಿಕಾರಿಗಳು ಅಬೀದ್ ಖಾನ್ ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸ್ ಮಹಾ ನಿರ್ದೇಶಕ ಸಂಜಯ್ ಕುಮಾರ್ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧಿತರಾದ ಕೆಲವು ಶಂಕಿತ ಉಗ್ರರು ನೀಡಿದ ಮಾಹಿತಿ ಆಧಾರದ ಮೇಲೆ ಅಬೀದ್ ಖಾನ್ ನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ತಾನು ಐಎಸ್ಐಎಸ್ ಸಿದ್ಧಾಂತಗಳನ್ನು ಪ್ರೇರೇಪಿತನಾಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


