'ಇಂದಿರಾ ಸೋಲ್ಡ್ ಇಂಡಿಯಾ': ಮೋದಿ ಇತಿಹಾಸವನ್ನು ಸರಿಯಾಗಿ ಓದಬೇಕು- ಕಾಂಗ್ರೆಸ್
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಮೋದಿಯವರು ಇತಿಹಾಸವನ್ನು ಸರಿಯಾಗಿ ಓದುವ ಅಗತ್ಯವಿದೆ...

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಮೋದಿಯವರು ಇತಿಹಾಸವನ್ನು ಸರಿಯಾಗಿ ಓದುವ ಅಗತ್ಯವಿದೆ ಎಂದು ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು, ರಾಜೇಂದ್ರ ಬಾಬು ಅವರಿಂದ ಇಂದಿರಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರು ಸರ್ಕಾರ ನಡೆಸಿದ್ದಾಗಿನಿಂದಲೂ ಕಾಂಗ್ರೆಸ್ ನೋಟು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಯೂ-ಟರ್ನ್ ಹೊಡೆಯುವ ಅಭ್ಯಾಸವಿರುವವರು ಇತಿಹಾಸವನ್ನು ಸರಿಯಾಗಿ ಓದುವ ಅಗತ್ಯವಿದೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೋಟು ನಿಷೇಧ ಮಾಡುವಂತೆ ಸಮಿತಿ ಶಿಫಾರಸ್ಸು ಮಾಡಿದ್ದರೂ, ಕೇವಲ ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಇದಕ್ಕೆ ಒಪ್ಪಿರಲಿಲ್ಲ. ದೇಶ ಇಂದು ಆರ್ಥಿಕತೆಯಲ್ಲಿ ಬಡ ರಾಷ್ಟ್ರವಾಗಿರುವುದಕ್ಕೆ ಇದೇ ಕಾರಣ. ಸಲಹೆ ಮೇರೆಗೂ ನೋಟು ನಿಷೇಧ ಮಾಡದೆ ಇಂದಿರಾ ಅವರು ಭಾರತವನ್ನು ಮಾರಿಬಿಟ್ಟಿದ್ದರು. ಸಮಿತಿ ಶಿಫಾರಸ್ಸಿನ ಬಳಿಕವೂ ನಕಾರ ವ್ಯಕ್ತಪಡಿಸಿದ ಇಂದಿರಾ ಅವರನ್ನು ಅಂದಿನ ಆರ್ಥಿಕ ಸಚಿವ ವೈ.ಬಿ. ಚೌಹಾಣ್ ಅವರು ಪ್ರಶ್ನೆ ಮಾಡಿದ್ದಕ್ಕೆ, ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ನಿಲ್ಲುವುದು ನಿಮಗೆ ಇಷ್ಟವಿಲ್ಲವೇ ಎಂದು ಪ್ರಶ್ನಿಸಿದ್ದರು ಎಂದು ಹೇಳಿದ್ದರು.
1971ರಲ್ಲಿ ಅಂದಿನ ಸರ್ಕಾರ ತೆಗೆದುಕೊಳ್ಳದ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಕಾಂಗ್ರೆಸ್ ಪಕ್ಷವೇ ದೊಡ್ಡದಾಗಿದ್ದು, ನಮಗೆ ದೇಶವೇ ಸರ್ವೋಚ್ಛವಾಗಿದೆ ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


