ಬಂದೂಕಿನಿಂದ ಬೆದರಿಕೆ ಹಾಕಿ ನವ ವಿವಾಹಿತೆ ಮೇಲೆ ಗಂಡ, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ!
ಸ್ವಂತ ಗಂಡನೇ ತನ್ನ ಸ್ನೇಹಿತರೊಂದಿಗೆ ಸೇರಿ ನವವಿವಾಹಿತೆಗೆ ಗನ್ ತೋರಿಸಿ ಬೆದರಿಕೆ ಹಾಕಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ರಾಂಚಿ: ಸ್ವಂತ ಗಂಡನೇ ತನ್ನ ಸ್ನೇಹಿತರೊಂದಿಗೆ ಸೇರಿ ನವವಿವಾಹಿತೆಗೆ ಗನ್ ತೋರಿಸಿ ಬೆದರಿಕೆ ಹಾಕಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.
ಜಾರ್ಖಂಡ್ ನ ಪಲಮೌ ಜಿಲ್ಲೆಯ ರಹೈಯ್ಯಾ ಎಂಬ ಕುಗ್ರಾಮದಲ್ಲಿ ಈ ಕುಕೃತ್ಯ ನಡೆದಿದ್ದು, ಅಫ್ಜಲ್ ಅನ್ಸಾರಿ ಎಂಬ ದೂರ್ತ ಗಂಡ ತನ್ನ ನವವಿವಾಹಿತ ಪತ್ನಿ ಮೇಲೆ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಈ ಬಗ್ಗೆ ಯುವತಿ ತನ್ನ ಪೋಷಕರೊಂದಿಗೆ ಸೇರಿ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಪ್ರಕರಣದಲ್ಲಿ ಪೊಲೀಸರ ಪ್ರವೇಶವಾಗುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ.
ಏನಿದು ಘಟನೆ?
ಜಾರ್ಖಂಡ್ ನ ಪಲಮೌ ಜಿಲ್ಲೆಯ ರಹೈಯ್ಯಾ ಎಂಬ ಕುಗ್ರಾಮದ ನಿವಾಸಿ ಅಫ್ಜಲ್ ಅನ್ಸಾರಿ ಎಂಬ ಅದೇ ಗ್ರಾಮದ ಯುವತಿಯೊಬ್ಬಳನ್ನು ಮದುವೆಯಾಗಿದ್ದ, ಕಳೆದ ಬುಧವಾರ ರಾತ್ರಿ ತನ್ನ ಇಬ್ಬರು ಸ್ನೇಹಿತರೊಂದಿಗೆ ಮನೆಗ ಆಗಮಿಸಿದ ಅಫ್ಜಲ್ ಅನ್ಸಾರಿ ಅವರ ಮುಂದೆಯೇ ಪತ್ನಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಸ್ನೇಹಿತರೂ ಕೂಡ ಅತ್ಯಾಚಾರ ಮಾಡುವಂತೆ ಪ್ರೇರೇಪಿಸಿದ್ದಾನೆ. ಅಲ್ಲದೆ ಈ ಕೃತ್ಯವನ್ನು ಅವರ ಸ್ನೇಹಿತರು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಹೇಗೋ ಅವರಿಂದ ತಪ್ಪಿಸಿಕೊಂಡ ಯುವತಿ ನೇರವಾಗಿ ತನ್ನ ಪೋಷಕರ ಬಳಿ ಹೋಗಿ ನಡೆದ ವಿಚಾರವನ್ನು ತಿಳಿಸಿದ್ದಾಳೆ.
ಬಳಿಕ ಕೂಡಲೇ ಪೋಷಕರೊಂದಿಗೆ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಲು ಅವರು ಮುಂದಾಗಿದ್ದಾರೆ. ಆದರೆ ಆ ಕ್ಷಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ ಪೊಲೀಸರು ಪರಸ್ಪರ ಸಂಧಾನ ಮಾಡಿಕೊಳ್ಳುವಂತೆ ಹೇಳಿ ಕಳುಹಿಸಿದ್ದಾರೆ. ಆದರೆ ಈ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಯಾದರೂ ಆರೋಪಿಗಳು ಮಾತ್ರ ಪರಾರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


