ದೇಶ

ಸಿಎಂ ಪನ್ನೀರ್ ಸೆಲ್ವಂರಿಂದ ನಾಳೆ ಪ್ರಧಾನಿ ಭೇಟಿ: ಜಯಲಲಿತಾಗೆ ಭಾರತರತ್ನ ನೀಡಲು ಮನವಿ

ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಡಿಸೆಂಬರ್ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ....

ಸಿಎಂ ಪನ್ನೀರ್ ಸೆಲ್ವಂರಿಂದ ನಾಳೆ ಪ್ರಧಾನಿ ಭೇಟಿ: ಜಯಲಲಿತಾಗೆ ಭಾರತರತ್ನ ನೀಡಲು ಮನವಿ
ಜಯಲಲಿತಾ
Published On :

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಡಿಸೆಂಬರ್ 19 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ  ಭೇಟಿ ಮಾಡಲಿದ್ದಾರೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಪನ್ನೀರ್ ಸೆಲ್ವಂ ಪ್ರಧಾನಿ ಬಳಿ ಮನವಿ ಮಾಡಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊತ್ತಮೊದಲ ಬಾರಿಗೆ ಡಿಸೆಂಬರ್ 10 ರಂದು ಸಚಿವರು ಹಾಗೂ ಶಾಸಕರುಗಳ ಸಭೆ ಕರೆದು ಜಯಲಲಿತಾ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಜೊತೆಗೆ ಸಂಸತ್ ಆವರಣದಲ್ಲಿ ಜಯಲಲಿತಾ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಸಿಎಂ ಆದ ನಂತರ ಮೊಟ್ಟ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡುತ್ತಿರುವ ಪನ್ನೀರ್ ಸೆಲ್ವಂ ತಮಿಳುನಾಡಿನ ವಿವಿಧ ಬೇಡಿಕೆಗಳನ್ನು ಪ್ರಧಾನಿ ಮೋದಿ ಅವರಿಗೆ ಸಲ್ಲಿಸಲಿದ್ದಾರೆ. ಜೊತೆಗೆ ವಾರ್ಧಾ ಚಂಡಮಾರುತದಿಂದ ಉಂಟಾಗಿರುವ ನಷ್ಟಕ್ಕೆ ಆರ್ಥಿಕ ಸಹಾಯ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.