ದೇಶ

ಸೇನೆಯ ವಿಚಾರದಲ್ಲಿ ರಾಜಕೀಯ ಸಲ್ಲ: ಸಿಪಿಐ(ಎಂ)

ಸೇವಾ ಹಿರಿತನವನ್ನು ಬದಿಗಿರಿಸಿ ನೂತನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಟೀಕಿಸಿದೆ.

ಸೇನೆಯ ವಿಚಾರದಲ್ಲಿ ರಾಜಕೀಯ ಸಲ್ಲ: ಸಿಪಿಐ(ಎಂ)
ಸಿಪಿಐ-ಎಂ
Published On :
ನವದೆಹಲಿ: ಸೇವಾ ಹಿರಿತನವನ್ನು ಬದಿಗಿರಿಸಿ ನೂತನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಟೀಕಿಸಿದೆ.
ನೂತನ ಸೇನಾ ಮುಖ್ಯಸ್ಥರನ್ನು ಸೇವಾ ಹಿರಿತನವನ್ನು ಬದಿಗಿರಿಸಿ ನೇಮಕ ಮಾಡಲಾಗಿದೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕ್ರಮ ಸರ್ಕಾರದ ಉದ್ದೇಶಗಳ ಪ್ರಶ್ನೆಗಳು ಉದ್ಭವಿಸುವಂತೆ ಮಾಡಿದೆ ಎಂದು ಸಿಪಿಐ(ಎಂ) ಅಸಮಾಧಾನ ವ್ಯಕ್ತಪಡಿಸಿದೆ.   
ಭಾರತೀಯ ಸೇನೆಯನ್ನು ರಾಜಕೀಯ ಹಸ್ತಕ್ಷೇಪಗಳಿಗೆ ಗುರಿ ಮಾಡುವುದು ಸರಿಯಲ್ಲ ಎಂದು ಸಿಪಿಐ(ಎಂ) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಭಾರತೀಯ ಸೇನೆಗೆ ಲೆ| ಜನರಲ್ ಬಿಪಿನ್ ರಾವತ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗಿಂತ ಸೇವಾವಧಿಯಲ್ಲಿ ಹಿರಿಕರೆನಿಸಿರುವ ಲೆಫ್ಟಿನೆಂಟ್ ಜನರಲ್'ಗಳಿದ್ದರೂ ಬಿಪಿನ್ ರಾವತ್ ಅವರನ್ನು ಸೇನಾ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.