ದೇಶ

ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿ ಗೆಲುವು : ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ

15 ವರ್ಷಗಳ ನಂತರ ಭಾರತ ಜೂನಿಯರ್ ಹಾಕಿ ತಂಡ ಬೆಲ್ಜಿಯಂ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ..

ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿ ಗೆಲುವು : ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ
ನರೇಂದ್ರ ಮೋದಿ
Published On :

ನವದೆಹಲಿ: 15 ವರ್ಷಗಳ ನಂತರ ಭಾರತ ಜೂನಿಯರ್ ಹಾಕಿ ತಂಡ ಬೆಲ್ಜಿಯಂ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಲಖನೌನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಬೆಲ್ಜಿಯಂ ತಂಡವನ್ನು 2-1 ಗೋಲುಗಳಿಂದ ಮಣಿಸಿದ್ದು 15 ವರ್ಷಗಳ ಬಳಿಕ ವಿಶ್ವಕಪ್ ಜಯಿಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ. 2001ರಲ್ಲಿ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪ್ರಶಸ್ತಿ ಗಳಿಸಿದ್ದ ಭಾರತ ಇಂದು ಮತ್ತೊಮ್ಮೆ ಚಾಂಪಿಯನ್ ಆಗಿದೆ.

ಟೂರ್ನಿ ಗೆದ್ದ ಭಾರತ ಜೂನಿಯರ್ ಹಾಕಿ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ಯುವ ಆಟಗಾರರ ಬಗ್ಗೆ ಅತೀವವಾಗಿ ಹೆಮ್ಮೆಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಗೆಲುವು ಹಾಕಿ ಕ್ರೀಡೆಯನ್ನು ದೇಶದಲ್ಲಿ ಅತಿ ಹೆಚ್ಚು ಜನಪ್ರಿಯಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.