ಚಂಡೀಗಢ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಜಯ
ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ನಡೆದ ಚಂಢೀಗಢ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಕಾಲಿದಳ ಮೈತ್ರಿಕೂಟ ಭರ್ಜರಿ...

Published On :
ಚಂಡೀಗಢ: ಗರಿಷ್ಠ ಮುಖಬೆಲೆಯ ನೋಟುಗಳ ನಿಷೇಧದ ಬಳಿಕ ನಡೆದ ಚಂಢೀಗಢ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅಕಾಲಿದಳ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.
26 ಸೀಟುಗಳಿರುವ ಮಹಾನಗರ ಪಾಲಿಕೆಯಲ್ಲಿ ಪ್ರಸ್ತುತ ಮೈತ್ರಿಕೂಟ 21 ಸೀಟುಗಳನ್ನು ಗೆದ್ದುಕೊಂಡಿದ್ದು, ಮೊದಲ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಕೇಂದ್ರ ಸರ್ಕಾರದಲ್ಲಿರುವ ಆಡಳಿತಾರೂಢ ಬಿಜೆಪಿಯ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಹಿಂದೆ ಬಿಜೆಪಿ ಅಕಾಲಿದಳ ಮೈತ್ರಿಕೂಟ 12 ಸೀಟು ಗೆದ್ದಿದ್ದು ಇದೀಗ ಹೆಚ್ಚುವರಿಯಾಗಿ 9 ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್ 11 ಸೀಟು ಗೆದ್ದಿತ್ತು ಆದರೆ ಈಗ 7 ಸೀಟುಗಳನ್ನು ಕಳೆದುಕೊಂಡು 4 ಸೀಟುಗಳನ್ನು ಗೆದ್ದಿದೆ. ಇನ್ನು ಸ್ವತಂತ್ರ ಅಭ್ಯರ್ಥಿಯೊಬ್ಬರು ಒಂದು ಸೀಟು ಗೆದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿCHANDIGARHಚಂಡೀಗಢShiromani Akali Dalಶಿರೋಮಣಿ ಅಕಾಲಿದಳMunicipal Corporation pollsಮಹಾನಗರ ಪಾಲಿಕೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


