ಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ
ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ...

ಮುಂಬೈ: ಏರ್ ಇಂಡಿಯಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ ಸುತ್ತಲೂ ದಟ್ಟ ಹೊಗೆ ಆವರಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ.
ಮುಂಬೈನ ನಾರಿಮನ್ ಹೌಸ್ ಹತ್ತಿರವಿರುವ ಏರ್ ಇಂಡಿಯಾ ಕಟ್ಟಡದ 22ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ತಿಳಿದುಬಂದಿದ್ದು, 4 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿರುವ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.
ಬೆಂಕಿ ಅವಘಡಕ್ಕೆ ಯಾವುದೇ ಕಾರಣಗಳು ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


