ದೇಶ

ಮೋದಿಯವರಲ್ಲಿ ಭಾರತಕ್ಕೆ ಸಿಕ್ಕಿದ್ದು ದುರ್ಬಲ ಪ್ರಧಾನಿ: ಆಮ್ ಆದ್ಮಿ ಪಕ್ಷ

ನೋಟು ನಿಷೇಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಮ್ ಆದ್ಮಿ ಪಕ್ಷ ಮೋದಿಯವರಲ್ಲಿ ಭಾರತಕ್ಕೆ ಸಿಕ್ಕಿದ್ದು ದುರ್ಬಲ ಪ್ರಧಾನಿ ಎಂದು ಟೀಕಿಸಿದೆ.

ಮೋದಿಯವರಲ್ಲಿ ಭಾರತಕ್ಕೆ ಸಿಕ್ಕಿದ್ದು ದುರ್ಬಲ ಪ್ರಧಾನಿ: ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷ
Published On :
ನವದೆಹಲಿ: ನೋಟು ನಿಷೇಧದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಆಮ್ ಆದ್ಮಿ ಪಕ್ಷ ಮೋದಿಯವರಲ್ಲಿ ಭಾರತಕ್ಕೆ ಸಿಕ್ಕಿದ್ದು ದುರ್ಬಲ ಪ್ರಧಾನಿ ಎಂದು ಟೀಕಿಸಿದೆ. 
ಪ್ರಧಾನಿ ವಿರುದ್ಧ ನಿರಂತರವಾಗಿ ನಿರ್ಧಾರ ಬದಲಿಸುವ ಆರೋಪ ಮಾಡಿದ್ದು, ನೋಟು ನಿಷೇಧದ ನಂತರ ನೋಟು ಬದಲಾವಣೆ ಪ್ರಕ್ರಿಯೆಗಾಗಿ ಕೇಂದ್ರ ಸರ್ಕಾರ 59 ಅಧಿಸೂಚನೆ ಹೊರಡಿಸಿದೆ. ಭಾರತದ ಯಾವುದೇ ಸರ್ಕಾರದ ರ್ಪಧಾನಿಗಳು ಈ ರೀತಿ ಪದೇ ಪದೇ ನಿರ್ಧಾರಗಳನ್ನು ಬದಲಿಸಿದ ಉದಾಹರಣೆಗಳಿಲ್ಲ ಎಂದು ಆಮ್ ಆದ್ಮಿ ಪಕ್ಷ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ. 
ಪದೇ ಪದೇ ನಿರ್ಧಾರ ಬದಲಿಸುವುದು ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಅಥವಾ ಅವರ ಮಾತಿಗೆ ಯಾವುದೇ ಅರ್ಥ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅಶುತೋಷ್ ಹೇಳಿದ್ದಾರೆ. 
ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಹೊರಡಿಸಿರುವ ಆರ್ ಬಿಐ  ಖಾತೆದಾರರು ತಮ್ಮ ಬಳಿ ಇರುವ 5 ಸಾವಿರಕ್ಕೂ ಹೆಚ್ಚು ಮೊತ್ತದ ಹಳೆಯ ನೋಟುಗಳನ್ನು ಡಿಸೆಂಬರ್ 30ರವರೆಗೂ ಒಂದು ಬಾರಿ ಮಾತ್ರ ಜಮಾ ಮಾಡಲು ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿಯವರಲ್ಲಿ ಭಾರತಕ್ಕೆ ಸಿಕ್ಕಿದ್ದು ದುರ್ಬಲ ಪ್ರಧಾನಿ ಎಂದು ಟೀಕೆ ಮಾಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.