ದೇಶ

ನೋಟ್ ನಿಷೇಧ ಅವ್ಯವಸ್ಥೆ ನಾವು ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ: ಅಖಿಲೇಶ್

ರಾಜ್ಯದಲ್ಲಿ ಜಾತಿ ರಾಜಕೀಯ ಅಂತ್ಯವಾಗಿದ್ದು, ಈಗ ಚುನಾವಣೆಯಲ್ಲಿ ಅಭಿವೃದ್ಧಿ ಮತ್ತು ನೋಟ್ ನಿಷೇಧದ ಉಂಟಾದ ಸಮಸ್ಯೆಗಳು...

ನೋಟ್ ನಿಷೇಧ ಅವ್ಯವಸ್ಥೆ ನಾವು ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ: ಅಖಿಲೇಶ್
ಅಖಿಲೇಶ್ ಯಾದವ್
Published On :
ಲಖನೌ: ರಾಜ್ಯದಲ್ಲಿ ಜಾತಿ ರಾಜಕೀಯ ಅಂತ್ಯವಾಗಿದ್ದು, ಈಗ ಚುನಾವಣೆಯಲ್ಲಿ ಅಭಿವೃದ್ಧಿ ಮತ್ತು ನೋಟ್ ನಿಷೇಧದ ಉಂಟಾದ ಸಮಸ್ಯೆಗಳು ಸಮಾಜವಾದಿ ಪಕ್ಷಕ್ಕೆ ಪೂರಕವಾಗಲಿವೆ ಎದು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬುಧವಾರ ಹೇಳಿದ್ದಾರೆ.
ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಚುನಾವಣೆಯ ವಿಷಯಗಳು ಬದಲಾಗಿದ್ದು, ನಾವು ಮತ್ತೆ ಅಧಿಕಾರಕ್ಕೆ ಬರಲು ನೋಟ್ ಬ್ಯಾನ್ ಸಹಕಾರಿಯಾಗಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ಉತ್ತರ ಪ್ರದೇಶ ಜನತೆ ನಮ್ಮ ಅಭಿವೃದ್ಧಿ ಕೆಲಸ ನೋಡಿ ಸಮಾಜವಾದಿ ಪಕ್ಷಕ್ಕೆ ಮತ ನೀಡುತ್ತಾರೆ. ಜಾತಿ ನೋಡಿ ಅಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮತ್ತು ಬಿಎಸ್ಪಿ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದು, ಕಳೆದ ಎರಡು ವರ್ಷಗಳಲ್ಲಿ ಬಿಜೆಪಿ ಉತ್ತರ ಪ್ರದೇಶ ಯಾವುದೇ ಕೆಲಸ ಮಾಡಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವ ಮನೋಹರ್ ಪರಿಕ್ಕರು ಅವರು ಉತ್ತರ ಪ್ರದೇಶದಿಂದ ಆಯ್ಕೆಯಾಗಿದ್ದಾರೆ. ಅಲ್ಲದೆ ನಮ್ಮ ರಾಜ್ಯ ಅತಿ ಹೆಚ್ಚು ಬಿಜೆಪಿ ಸಂಸದರನ್ನು ಆಯ್ಕೆ ಮಾಡಿದೆ. ಆದರೂ ಉತ್ತರ ಪ್ರದೇಶಕ್ಕಾಗಿ ಅವರು ಏನೂ ಮಾಡಿಲ್ಲ. ಕೇವಲ ಆದರ್ಶ ಗ್ರಾಮ ಯೋಜನೆ ಮಾತ್ರ ಜಾರಿ ಮಾಡಿದ್ದಾರೆ ಎಂದು ಅಖಿಲೇಶ್ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.