ದೇಶ

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್'ನಲ್ಲಿ ಅಗ್ನಿ ಅವಘಡ; 6 ಮಂದಿ ಸಜೀವ ದಹನ

ಪೂರ್ವ ಮಹಾರಾಷ್ಟ್ರದ ಹೋಟೆಲ್ ಬಿಂದಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ನಲ್ಲಿದ್ದ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ ನಡೆದಿದೆ...

ಮಹಾರಾಷ್ಟ್ರ: ಗೊಂಡಿಯಾದ ಹೋಟೆಲ್'ನಲ್ಲಿ ಅಗ್ನಿ ಅವಘಡ; 6 ಮಂದಿ ಸಜೀವ ದಹನ
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವುದು
Published On :

ಗೊಂಡಿಯಾ: ಪೂರ್ವ ಮಹಾರಾಷ್ಟ್ರದ ಹೋಟೆಲ್ ಬಿಂದಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ನಲ್ಲಿದ್ದ 6 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಬುಧವಾರ ನಡೆದಿದೆ.

ಇಂದು ಬೆಳಿಗ್ಗೆ 3.30ರ ಸುಮಾರಿಗೆ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಒಳಗೆ 6 ಮಂದಿ ಕೆಲಸಗಾರರು ಮಲಗಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಲಗಿದ್ದ 6 ಮಂದಿ ಕೆಲಸಗಾರರು ಸಜೀವವಾಗಿ ದಹನವಾಗಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಹೋಟೆಲ್ ಒಳಗೆ ಇನ್ನು ಕೆಲವು ಸಿಬ್ಬಂದಿಗಳು ಸಿಲುಕಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿ ನಿಯಂತ್ರಣಕ್ಕೆ ಬಂದಿತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.