ಉಗ್ರರ ಇರುವಿಕೆಯ ಶಂಕೆ: ಜಮ್ಮು-ಕಾಶ್ಮೀರದ ಬಂಡಿಪೊರಾದಲ್ಲಿ ಸೇನಾಪಡೆ ಕಣ್ಗಾವಲು
ಉಗ್ರಗಾಮಿಗಳು ಇರುವ ಶಂಕೆಯಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದ ಹಜಿನ್ ಗ್ರಾಮದಲ್ಲಿ...

Published On :
ಬಂಡಿಪೊರಾ: ಉಗ್ರಗಾಮಿಗಳು ಇರುವ ಶಂಕೆಯಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದ ಹಜಿನ್ ಗ್ರಾಮದಲ್ಲಿ ಸೇನಾ ಪಡೆ ಮತ್ತು ಪೊಲೀಸರು ಬೆಳಗ್ಗೆಯಿಂದ ಪ್ರದೇಶದಲ್ಲಿ ಬೀಡುಬಿಟ್ಟು ಕಾಯುತ್ತಿದ್ದಾರೆ.
ಇಲ್ಲಿ ಕಳೆದ ತಿಂಗಳು 25ರಂದು ಉಗ್ರಗಾಮಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದು ಇಬ್ಬರು ಉಗ್ರರು ಮತ್ತು ಸೇನಾ ಯೋಧರು ಮೃತಪಟ್ಟಿದ್ದರು.
ಸೆಪ್ಟೆಂಬರ್ 29ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳ ಲಾಂಚ್ ಪಾಡ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆದ ನಂತರ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಭಾಗ ಮತ್ತು ಗಡಿ ನಿಯಂತ್ರಣ ರೇಖೆ ಬಳಿ 286 ಸಲ ಗುಂಡು ಮತ್ತು ಶೆಲ್ ದಾಳಿ ನಡೆದಿತ್ತು. ಇದರಿಂದ ಕಳೆದ ಮೂರು ತಿಂಗಳಲ್ಲಿ 26 ಮಂದಿ ನಾಗರಿಕರು ಮತ್ತು 14 ಮಂದಿ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


