ದೆಹಲಿ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 58 ಲಕ್ಷ ಹಣ ವಶಕ್ಕೆ!
ಕಪ್ಪುಹಣದ ವಿರುದ್ಧ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಶುಕ್ರವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 58 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ಕಪ್ಪುಹಣದ ವಿರುದ್ಧ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಶುಕ್ರವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 58 ಲಕ್ಷ ರು.ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೈಜಿರಿಯಾ ಮೂಲದ ಪ್ರಯಾಣಿಕ ದೆಹಲಿಯಿಂದ ತಮಿಳುನಾಡಿನ ಕೊಯಮತ್ತೂರಿಗೆ ಪ್ರಯಾಣಿಸಲು ಆಗಮಿಸಿದ್ದ ವೇಳೆ ಅಧಿಕಾರಿಗಳು ಇವರಿಂದ 58 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕನ ಬಳಿ ಹಣದ ಬಗ್ಗೆ ಖಚಿತ ದಾಖಲೆಗಳು ಪತ್ತೆಯಾಗದ ಹಿನ್ನಲೆಯಲ್ಲಿ ಸಿಐಎಸ್ ಎಫ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ. 58.07 ಲಕ್ಷ ಹಣದ ಪೈಕಿ 53.78 ಲಕ್ಷ ಹಣ ಹೊಸ 500 ಮತ್ತು 2000 ಸಾವಿರ ರು. ನೋಟುಗಳಲ್ಲಿ ಪತ್ತೆಯಾಗಿದ್ದು, ಉಳಿದ 4.29 ಲಕ್ಷ ಹಣ ಹಳೆಯ ನಿಷೇಧಿತ 500 ಮತ್ತು 1000 ರು. ನೋಟುಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಪ್ರಯಾಣಿಕವನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


