ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ: ರಾಜನಾಥ ಸಿಂಗ್ ವಿಶ್ವಾಸ
ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ...

ನವದೆಹಲಿ: ಉತ್ತರಪ್ರದೇಶದಲ್ಲಿ ಮುಂಬರುವ ಚುನಾವಾಣೆಯಲ್ಲಿ ಖಂಡಿತವಾಗಿಯೂ ಬಿಜೆಪಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶನಿವಾಸ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಖನೌನಲ್ಲಿ ಆಯೋಜಿಸಲಾಗಿದ್ದ ಪರಿವರ್ತನ್ ರ್ಯಾಲಿಯಲ್ಲಿ ಭಾಗಿಯಾಗುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪರಿವರ್ತನ್ ರ್ಯಾಲಿ ಮೂಲಕ ಬಿಜೆಪಿ ಉತ್ತರಪ್ರದೇಶದಲ್ಲಿ ಬದಲಾವಣೆ ಎಂಬ ಅಡಿಪಾಯವನ್ನು ಹಾಕುತ್ತಿದೆ. ರಾಜ್ಯದಲ್ಲಿ ಬದಲಾವಣೆ ಬರಲಿದೆ ಎಂಬುದರ ಬಗ್ಗೆ ಇಲ್ಲಿನ ಜನರಿಗೂ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ನೋಟು ನಿಷೇಧ ಕುರಿತಂತೆ ಮಾತನಾಡಿರುವ ಅವರು, ರು.500 ಹಾಗೂ 1,000 ಮುಖಬೆಲೆಯ ದುಬಾರಿ ನೋಟಿನ ಮೇಲೆ ನಿಷೇಧ ಹೇರಿರುವಿಕೆಯನ್ನು ಚುನಾವಣೆ ಆಧಾರದ ಮೇಲೆ ನೋಡಬಾರದು. ನೋಟು ನಿಷೇಧ ನಿರ್ಧಾರ ಚುನಾವಣೆಯ ಗೆಲುವು ಅಥವಾ ಸೋಲಿಗೆ ಸಂಬಂಧಿಸಿದ್ದಲ್ಲ. ದೇಶದ ಹಿತಾಸಕ್ತಿಯನ್ನು ಅಲೋಚಿಸಿ ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ. ಹೀಗಾಗಿ ನಿರ್ಧಾರ ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ತಿಳಿಸಿದ್ದಾರೆ.
ನೋಟು ನಿಷೇಧ ನಿರ್ಧಾರ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಸಹಾಯಕವಾಗಿದೆ. ನಿರ್ಧಾರದ ಬಳಿಕ ಸಾಕಷ್ಟು ನಕ್ಸಲರ ಖಾತೆಗಳನ್ನು ವಶಕ್ಕೆ ಪಡೆಯಲಾಗಿದೆ. ನೋಟು ನಿಷೇಧ ನಿರ್ಧಾರ ಭ್ರಷ್ಟಾಚಾರ ಹಾಗೂ ಕಪ್ಪುಹಣ ನಿಯಂತ್ರಣಕ್ಕೆ ಸಹಾಯಕವಾಗಲಿದೆ. ಅಲ್ಲದೆ, ದೇಶದ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


