ಉಚ್ಛಾಟಿತ ತ.ನಾ ಮುಖ್ಯಕಾರ್ಯದರ್ಶಿ ರಾಮ್ ಮೋಹನ್ ರಾವ್ ಆಸ್ಪತ್ರೆಗೆ ದಾಖಲು
ಆದಾಯ ತೆರಿಗೆ ಇಲಾಖೆ ದಾಳಿ ನಂತರ ತಮಿಳುನಾಡು ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದಿದ್ದ ರಾಮ ಮೋಹನ್ ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು...

ಚೆನ್ನೈ: ಆದಾಯ ತೆರಿಗೆ ಇಲಾಖೆ ದಾಳಿ ನಂತರ ತಮಿಳುನಾಡು ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿದಿದ್ದ ರಾಮ ಮೋಹನ್ ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ರಾಮ ಮೋಹನ್ ರಾವ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಮ ರಾವ್ ಅವರು ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಕೆಲ ದಿನಗಳ ಹಿಂದಷ್ಟೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಮ ಮೋಹನ್ ರಾವ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಚಿನ್ನ ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಇದಾದ ಒಂದು ದಿನದ ಬಳಿಕ ಮುಖ್ಯ ಕಾರ್ಯದರ್ಶಿ ಸ್ಥಾನದಿಂದ ರಾಮ ರಾವ್ ಅವರನ್ನು ತಮಿಳುನಾಡು ಸರ್ಕಾರ ಕಿತ್ತುಹಾಕಿತ್ತು. ಅಲ್ಲದೆ, ಆ ಸ್ಥಾನಕ್ಕೆ ಗಿರಿಜಾ ವಿದ್ಯಾನಾಥನ್ ಅವರನ್ನು ನೇಮಕ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


