ದೆಹಲಿ: ಕಾರಿನಲ್ಲಿ ಬಾಲಕಿಯ ಹತ್ಯೆ- ಪ್ರಮುಖ ಆರೋಪಿ ಬಂಧನ
ರಾಜಧಾನಿ ದೆಹಲಿಯಲ್ಲಿ ಕಾರೊಂದರಲ್ಲಿ ಹದಿಹರೆಯದ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶುಕ್ರವಾರ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಕಾರೊಂದರಲ್ಲಿ ಹದಿಹರೆಯದ ಯುವತಿಯೊಬ್ಬಳನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಊಟಕ್ಕೆಂದು ತನ್ನ ಇಬ್ಬರು ಗೆಳೆಯರೊಂದಿಗೆ ಕಾರಿನಲ್ಲಿ ಹೋಗಿದ್ದ ಯುವತಿಯನ್ನು, ಮರಳಿ ಮನೆಗೆ ಬರುವ ವೇಳೆ ಆಕೆಯ ಸ್ನೇಹಿತನೇ ಗುಂಡಿಟ್ಟು ಹತ್ಯೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ಆರಂಭಿಸಿದ್ದರು.
ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದೇವೆಂದು ದೆಹಲಿ ಪೊಲೀಸ್ ಆಯುಕ್ತ ಸುರೇಂದ್ರ ಕುಮಾರ್ ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ. ಅಲ್ಲದೆ, ಆರೋಪಿ ತನ್ನ ತಪ್ಪೊಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.
ಹತ್ಯೆಯಾದ ಯುವತಿಯನ್ನು ಸಿಮ್ರನ್ ಎಂದು ಹೇಳಲಾಗುತ್ತಿದ್ದು, ಆರೋಪಿ ಶುಭಂ ಯುವತಿಯನ್ನು ಕೆಲ ದಿನಗಳ ಹಿಂದಷ್ಟೇ ಗುಂಡಿಟ್ಟು ಕೊಲೆ ಮಾಡಿದ್ದ.
ಸಿಮ್ರನ್ ನಿತಿನ್ ಎಂಬ ಯುವಕನೊಬ್ಬನೊಂದಿಗೆ ಸ್ನೇಹ ಮಾಡಿದ್ದಳು. ನಿತಿನ್ ಎಂದರೆ ಶುಭಂಗೆ ಆಗುತ್ತಿರಲಿಲ್ಲ. ಅಲ್ಲದೆ, ಸಿಮ್ರನ್ ಪೋಷಕರೂ ಕೂಡ ಶುಭಂನನ್ನು ತಿರಸ್ಕಾರ ಭಾವದಿಂದ ನೋಡುತ್ತಿದ್ದರು. ಹೀಗಾಗಿಯೇ ಶುಭಂ ಸಿಮ್ರನ್ ಳನ್ನು ಹತ್ಯೆ ಮಾಡಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


