ಬಿಸಿ ಊಟ ಕ್ಯೂನಲ್ಲಿ ಮಕ್ಕಳ ತಳ್ಳಾಟ: ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು
ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ಕ್ಯೂನಲ್ಲಿ ನಿಂತಿದ್ದ ವೇಳೆ ಕುದಿಯುತ್ತಿರುವ ಸಾಂಬಾರ್ ಪಾತ್ರಯೊಳಗೆ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಲಗೊಂಡ ಜಿಲ್ಲೆಯ ಇದುಲೂರು...

ನಲಗೊಂಡ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟಕ್ಕಾಗಿ ಕ್ಯೂನಲ್ಲಿ ನಿಂತಿದ್ದ ವೇಳೆ ಕುದಿಯುತ್ತಿರುವ ಸಾಂಬಾರ್ ಪಾತ್ರಯೊಳಗೆ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿರುವ ಘಟನೆ ನಲಗೊಂಡ ಜಿಲ್ಲೆಯ ಇದುಲೂರು ಗ್ರಾಮದಲ್ಲಿ ನಡೆದಿದೆ.
ಬಿ.ಜಯವರ್ಧನ್ ಸಾವನ್ನಪ್ಪಿದ ಬಾಲಕ. ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ 1ನೇ ತರಗತಿಯನ್ನು ಓದುತ್ತಿದ್ದ. ಶಾಲೆಯಲ್ಲಿ ನಿನ್ನೆ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿದ್ದು. ಊಟ ತೆಗೆದುಕೊಳ್ಳಲೆಂದು ಬಾಲಕ ಸರದಿ ಸಾಲಿನಲ್ಲಿ ನಿಂತಿದ್ದ. ಸಾಲಿನಲ್ಲಿ ನಿಂತಿದ್ದ ವೇಳೆ ಬಾಲಕರು ಒಬ್ಬರಿಗೊಬ್ಬರು ತಳ್ಳಾಡಿದ್ದಾರೆ. ಈ ವೇಳೆ ಬಿಸಿ ಸಾಂಬಾರ್ ಪಾತ್ರೆಯ ಹತ್ತಿರದಲ್ಲೇ ನಿಂತಿದ್ದ ಜಯವರ್ಧನ್ ಇದ್ದಕ್ಕಿದ್ದಂತೆ ಪಾತ್ರೆಗೆ ಬಿದ್ದಿದ್ದಾನೆ.
ಪರಿಣಾಮ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಸಿಬ್ಬಂದಿಗಳು ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲುಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಬಾಲಕನ ಕುಟುಂಬಸ್ಥರಿಗೆ ರು.2 ಲಕ್ಷ ಪರಿಹಾರವನ್ನು ನೀಡಿದ್ದಾರೆ. ಅಲ್ಲದೆ, ಕುಟುಂಬ ಸದಸ್ಯರಿಗೊಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಮನೆಯೊಂದನ್ನು ಪರಿಹಾರವಾಗಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕಿ ಉಮಾ ರಾಣಿ, ಬಿಸಿ ಊಟ ನೀಡುತ್ತಿದ್ದ ಶಿಕ್ಷಕ ಮುರಳಿ ಕೃಷ್ಣ ಅವರನ್ನು ನಿರ್ಲಕ್ಷ್ಯತನದ ಆಧಾರದ ಮೇಲೆ ಅಮಾನತು ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


