ಅಗಸ್ಟಾ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ಎಸ್.ಪಿ ತ್ಯಾಗಿಗೆ ಜಾಮೀನು
ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಪ್ರಮುಖ ಆರೋಪಿ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ಡಿ.26 ರಂದು ಜಾಮೀನು ಮಂಜೂರು ಮಾಡಲಾಗಿದೆ.

Published On :
ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಪ್ರಮುಖ ಆರೋಪಿ ವಾಯುಪಡೆ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಡಿ.26 ರಂದು ಜಾಮೀನು ಮಂಜೂರು ಮಾಡಿದೆ.
ಹಗರಣದ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಡಿ.9 ರಂದು ತ್ಯಾಗಿ ಸೇರಿದಂತೆ ಮೂವರನ್ನು ಬಂಧಿಸಿತ್ತು. 3,600 ಕೋಟಿ ರು. ಮೌಲ್ಯದ ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಎಸ್.ಪಿ.ತ್ಯಾಗಿ, ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಹಾಗೂ ಗೌತಮ್ ಖೇತನ್ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು.
ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳು ಸೇರಿ ಒಟ್ಟು 13 ಮಂದಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ್ದು, ತ್ಯಾಗಿ ಅವರು ಅಗಸ್ಟಾ ವೆಸ್ಟ್ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.
ದೇಶದ ಅತಿ ಪ್ರಮುಖ ಗಣ್ಯರ ಪಯಣಕ್ಕೆ ಅಗಸ್ಟಾ ವೆಸ್ಟ್ ಲ್ಯಾಂಡ್‌ನಿಂದ 12 ಹೆಲಿಕಾಪ್ಟರ್ಗಳನ್ನು ಕೊಳ್ಳಲು 2010ರಲ್ಲಿ ಭಾರತೀಯ ವಾಯುಪಡೆ ಒಪ್ಪಂದ ಮಾಡಿಕೊಂಡಿತ್ತು. ಆದರೆ ಇದರಲ್ಲಿ ಭಾರಿ ಪ್ರಮಾ ಣದ ಅವ್ಯವಹಾರ ನಡೆದಿದ್ದು, ಪ್ರತಿಸ್ಪಧಿಗಳನ್ನು ಹಣಿಯಲು ಅಗಸ್ಟಾ ವೆಸ್ಟ್ ಲ್ಯಾಂಡ್ ನೂರಾರು ಕೋಟಿ ರುಪಾಯಿ ಕಿಕ್‌ಬ್ಯಾಕ್ ನೀಡಿದೆ ಎಂಬ ಆರೋಪದ ಮೇಲೆ ಫೆಬ್ರವರಿ 12, 2013ರಲ್ಲಿ ಇಟಲಿ ಪೊಲೀಸರು ಅಗಸ್ಟಾ ವೆಸ್ಟ್ ಲ್ಯಾಂಡ್ ಮಾತೃ ಸಂಸ್ಥೆ ಫಿನ್‌ಮೆಕ್ಯಾನಿಕಾದ ಮುಖ್ಯಸ್ಥ ಜುಸೆಪ್ಪಿ ಒರ್ಸಿಯನ್ನು ಬಂಧಿಸಿದ್ದರು. ಇದಾದ ಬಳಿಕ ಹೆಲಿಕಾಪ್ಟರ್ ಖರೀದಿ ಹಗರಣ ಬಯಲಿಗೆ ಬಂದಿತು. ತಕ್ಷಣವೇ ಭಾರತದ ಅಂದಿನ ರಕ್ಷಣಾ ಸಚಿವ ಎ.ಕೆ.ಆಂಟನಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


