ಉತ್ತರಪ್ರದೇಶ ಚುನಾವಣೆ: ಸಿಎಂ ಅಖಿಲೇಶ್ ಬೆಂಬಲಿತ ಅಭ್ಯರ್ಥಿಗಳ ಪಟ್ಟಿ ಮುಲಾಯಂಗೆ ರವಾನೆ
ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ಬಲ ಪ್ರದರ್ಶನವನ್ನು ಮಾಡಿದ್ದು, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ 403 ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಂಯ ಸಿಂಗ್ ಯಾದವ್...

ಲಖನೌ: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ಬಲ ಪ್ರದರ್ಶನವನ್ನು ಮಾಡಿದ್ದು, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ 403 ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಂಯ ಸಿಂಗ್ ಯಾದವ್ ಅವರಿಗೆ ಭಾನುವಾರ ಸಲ್ಲಿಕೆ ಮಾಡಿದ್ದಾರೆ.
ನಿನ್ನೆಯಷ್ಟೇ ಅಖಿಲೇಶ್ ಅವರು ಪಟ್ಟಿಯನ್ನು ಮುಲಾಯಂ ಅವರಿಗೆ ನೀಡಿದ್ದು, ಪಟ್ಟಿಗೆ ಮುಲಾಯಂ ಅವರು ತೀವ್ರ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ. ಅಲ್ಲದೆ, ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿರುವ ಮುಲಾಯಂ ಅವರು, ಪಕ್ಷದ ಹಿರಿಯ ನಾಯಕರನ್ನು ತಿರಸ್ಕರಿಸುತ್ತಿರುವುದಕ್ಕೆ ಬೇಸರವನ್ನು ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ಅಧಿಕೃತವಾಗಿ ಈ ಬಗ್ಗೆ ಯಾವುದೇ ಮಾಹಿತಿಗಳು ಹೊರಬಂದಿಲ್ಲ.
ಶಿವಪಾಲ್ ಯಾದವ್ ಅವರು ಮಾತನಾಡಿ, ಪಕ್ಷದಲ್ಲಿ ಯಾವುದೇ ನಾಯಕರು ಅಶಿಸ್ತಿನಿಂದ ನಡೆದುಕೊಂಡರೆ, ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪಕ್ಷ ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಅಖಿಲೇಶ್ ಯಾದವ್ ಅವರು ತಮ್ಮ ಶಕ್ತಿ ಪ್ರದರ್ಶನ ಮಾಡುವ ಸಲುವಾಗಿ ಮೊದಲ ಬಾರಿಗೆ ಸಮಾಜವಾದಿ ಪಕ್ಷದಗ ಶಾಸಕರ ಸಭೆ ನಡೆಸಿ ಪಕ್ಷದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನತೆಗೆ ಪ್ರಚುರಪಡಿಸಲು ಕೋರಿದ್ದರು. ಸಭೆ ಕೇವಲ ಸಮಾಜವಾದಿ ಪಕ್ಷದ ಶಾಸಕರಿಗೆ ಮಾತ್ರ ಸೀಮಿತವಿರಿಸಲಾಗಿತ್ತು.
ಇದೀಗ ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಅಖಿಲೇಶ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಮುಲಾಯಂಗೆ ನೀಡಿದ್ದಾರೆ. ಪಟ್ಯಿಯನ್ನು ಅಂತಿಮಗೊಳಿಸುವಲ್ಲಿ ಮತ್ತೆ ಸಮಾಜವಾದಿ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


