ಆಪ್ ಗೋವಾ ಸಿಎಂ ಅಭ್ಯರ್ಥಿಯನ್ನು ಬಿಜೆಪಿ ಬಲಿಪಶು ಮಾಡುತ್ತಿದೆ: ಕೇಜ್ರಿವಾಲ್
ಗೋವಾದ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಬಲಿಪಶು ಮಾಡುತ್ತಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

Published On :
ನವದೆಹಲಿ: ಗೋವಾದ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಬಲಿಪಶು ಮಾಡುತ್ತಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಸಿಎಂ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ನ ಪ್ರಾಮಾಣಿಕತೆ ಗೋವಾದ ಜನತೆಗೆ ತಿಳಿದಿದೆ, ಆದರೆ ಬಿಜೆಪಿ ಎಲ್ವಿಸ್ ಅವರನ್ನು ಬಲಿಪಶು ಮಾಡುತ್ತಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಹಗರಣವೊಂದರಲ್ಲಿ ಶಾಮೀಲಾಗಿರುವ ಆರೋಪದ ಸಂಬಂಧ ಗೋವಾದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಎಲ್ವಿಸ್ ಗೋಮ್ಸ್ ಅವರಿಗೆ ಸಮನ್ಸ್ ಜಾರಿ ಮಾಡಿದ ಬೆಳವಣಿಗೆ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ಆರೋಪ ಮಾಡಿದೆ.
ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಗೋವಾದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಗೋವಾದ ಬಂಧೀಖಾನೆಯ ಮಾಜಿ ಇನ್ಸ್‌ಪೆಕ್ಟರ್ ಜನರಲ್ ಎಲ್ವಿಸ್ ಗೋಮ್ಸ್ ಅವರನ್ನು ಕಳೆದ ವಾರ ಆಮ್ ಆದ್ಮಿ ಪಕ್ಷ ತನ್ನ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಶಿಸಿತ್ತು. ಆಪ್ ಪಕ್ಷದ ಸಿಎಂ ಅಭ್ಯರ್ಥಿ ವಿರುದ್ಧ ಈಗ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Goaಗೋವಾಅರವಿಂದ್ ಕೇಜ್ರಿವಾಲ್ಆಮ್ ಆದ್ಮಿ ಪಕ್ಷArvind Kejriwalchief ministerial candidateಮುಖ್ಯಮಂತ್ರಿ ಅಭ್ಯರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


