ಎಸ್ಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ, ಅಖಿಲೇಶ್ ಅಭ್ಯರ್ಥಿಗಳ ಪಟ್ಟಿಗೆ ಶಿವಪಾಲ್ ಯಾದವ್ ವಿರೋಧ
ಯಾದವ್ ಕುಟುಂಬ ಕಲಹ ಟಿಕೆಟ್ ಹಂಚಿಕೆಯಲ್ಲೂ ಮುಂದುವರೆದಿದ್ದು, ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಮಾಜವಾದಿ...

Published On :
ಲಖನೌ: ಯಾದವ್ ಕುಟುಂಬ ಕಲಹ ಟಿಕೆಟ್ ಹಂಚಿಕೆಯಲ್ಲೂ ಮುಂದುವರೆದಿದ್ದು, ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷದಿಂದ 403 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅಂತಿಮ ಪಟ್ಟಿಯನ್ನು ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ಅವರಿಗೆ ರವಾನಿಸಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ ಎಂದಿದ್ದಾರೆ.
ಅಖಿಲೇಶ್ ಯಾದವ್ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಟ್ಟೀಟ್ ನಾಡಿರುವ ಶಿವಪಾಲ್ ಯಾದವ್ ಅವರು, ವಿಧಾನಸಭೆ ಚುನಾವಣೆಯಲ್ಲಿ ಟಿಕೆಚ್ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮದೇ ಅಂತಿಮ ತೀರ್ಮಾನ ಎಂದಿದ್ದಾರೆ.
ಗೆಲುವಿನ ಆಧಾರದ ಮೇಲೆ ಈಗಗಾಲೇ 75 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಉಳಿದ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಪಕ್ಷದಲ್ಲಿ ಯಾವುದೇ ನಾಯಕರು ಅಶಿಸ್ತಿನಿಂದ ನಡೆದುಕೊಂಡರೆ, ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪಕ್ಷ ಅಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ಭಾನುವಾರ ಸಂಜೆ ಲಖನೌನಲ್ಲಿ ಮುಲಾಯಂ ಸಿಂಗ್ ಅವರಿಗೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಅಖಿಲೇಶ್ ಯಾದವ್ ನೀಡಿದ್ದರು. ಮೂಲಗಳ ಪ್ರಕಾರ ಮುಲಾಯಂ ಸಿಂಗ್ ಅಭ್ಯರ್ಥಿಗಳ ಪಟ್ಟಿ ಕುರಿತು ನಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಪಟ್ಟಿಯನ್ನು ಮತ್ತಷ್ಟು ಪರೀಷ್ಕೃತಗೊಳಿಸುವಂತೆ ಅಖಿಲೇಶ್ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಪಕ್ಷದಲ್ಲಿ ಎರಡು ಬಣಗಳು ನಿರ್ಮಾಣಗೊಂಡಿದ್ದು, ಒಂದು ಬಣದಲ್ಲಿ ಶಿವಪಾಲ್ ಯಾದವ್ ಮತ್ತು ಅಮರ್ ಸಿಂಗ್, ಮತ್ತೊಂದು ಬಣದಲ್ಲಿ ಅಖಿಲೇಶ್ ಯಾದವ್ ಮತ್ತು ರಾಮ ಗೋಪಾಲ್ ಯಾದವ್ ಕಾಣಿಸಿಕೊಂಡಿದ್ದಾರೆ. ಶುಕ್ರವಾರ ಮೊದಲ ಬಾರಿಗೆ ಪಕ್ಷದ ಶಾಸಕರ ಸಭೆ ನಡೆಸಿದ ಅಖಿಲೇಶ್ ರಾಜ್ಯ ಸರ್ಕಾರದ ಯೋಜನೆಗಳ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚನೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


