220 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಪಾಕಿಸ್ತಾನ
ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಬಂಧನಕ್ಕೊಳಪಡಿಸಲಾಗಿದ್ದ 518 ಭಾರತೀಯ ಮೀನುಗಾರರ ಪೈಕಿ 220 ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ...

ಲಾಹೋರ್: ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಬಂಧನಕ್ಕೊಳಪಡಿಸಲಾಗಿದ್ದ 518 ಭಾರತೀಯ ಮೀನುಗಾರರ ಪೈಕಿ 220 ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದರು. ಇದರ ಬೆನ್ನಲ್ಲೇ ಪಾಕಿಸ್ತಾನ ಇದೀಗ ಬಂಧನಕ್ಕೊಳಗಾಗಿದ್ದ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.
ಮೀನುಗಾರರ ಬಿಡುಗಡೆ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ಜೈಲು ಅಧೀಕ್ಷಕ ಹುಸೇನ್ ಸೆಹ್ತೋ ಅವರು, ಅಕ್ರಮವಾಗಿ ಪಾಕಿಸ್ತಾನದ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಲಾಗಿತ್ತು. ಇದೀಗ 220 ಭಾರತೀಯ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ. ವಾಘಾ ಗಡಿಯ ಬಳಿ ಭಾರತೀಯ ಅಧಿಕಾರಿಗಳಿಗೆ ಮೀನುಗಾರರನ್ನು ಒಪ್ಪಿಸಲಾಗುತ್ತದೆ. ಇನ್ನುಳಿದ 2019 ಮೀನುಗಾರರನ್ನು ಮುಂದಿನ ವರ್ಷ ಜನವರಿ 5 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


