ಬಿಜೆಪಿಯ ಗ್ರೀನ್ ಸಿಗ್ನಲ್ ಸಿಕ್ಕರೆ ಮಾತ್ರ ಉತ್ತರ ಪ್ರದೇಶದಲ್ಲಿ ಎಸ್ಪಿ-ಕಾಂಗ್ರೆಸ್ ಮೈತ್ರಿ ಸಾಧ್ಯ: ಮಾಯಾವತಿ
2017 ನೇ ಸಾಲಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು...

Published On :
ನವದೆಹಲಿ: 2017 ನೇ ಸಾಲಿನ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತಿವೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ, ಅದಕ್ಕೆ ಬಿಜೆಪಿ ಹಸಿರು ನಿಶಾನೆ ತೋರಿಸಿದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.
ಲಕ್ನೋದಲ್ಲಿ ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನ ಮೈತ್ರಿ ಬಿಜೆಪಿ ಗ್ರೀನ್ ಸಿಗ್ನಲ್ ಕೊಟ್ಟರೆ ಮಾತ್ರ ಸಾಧ್ಯ. ಮೈತ್ರಿಯಿಂದ ತನಗೆ ಉಪಕಾರವಾಗುತ್ತದೆ ಎಂದು ಮನಗಂಡರೆ ಮಾತ್ರ ಬಿಜೆಪಿ ಗ್ರೀನ್ ಸಿಗ್ನಲ್ ಕೊಡಲು ಸಾಧ್ಯ ಎಂದು ಆರೋಪಿಸಿದರು.
ಇಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೋಟು ನಿಷೇಧ ವಿಷಯಕ್ಕೆ ಹರಿಹಾಯ್ದ ಅವರು, ಕೇಂದ್ರ ಸರ್ಕಾರದ ಈ ನಡೆಯಿಂದಾಗಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಅದಕ್ಕೆ ಸೋಲು ಕಾಣಲಿದೆ ಎಂದರು.
ಲೋಕಸಭೆಯಲ್ಲಿ ಮಾಡಿರುವ ಭರವಸೆಗಳನ್ನು ಈಡೇರಿಸಲಾಗದೆ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿಯವರು ತರಾತುರಿಯಿಂದ ನೋಟುಗಳ ಅಮಾನ್ಯತೆಯನ್ನು ಜಾರಿಗೆ ತಂದರು. ಇದಕ್ಕೆ ಯಾವುದೇ ತಯಾರಿ ನಡೆಸಲಿಲ್ಲ. ಈಗ ಪ್ರಧಾನಿ ಕುತ್ತಿಗೆಗೆ ರಾಜಕೀಯ ಕಡಲುಕೋಳಿಯಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದರು.
ನೋಟುಗಳ ಅಮಾನ್ಯತೆ ಕಪ್ಪು ಹಣ ಮತ್ತು ಭ್ರಷ್ಟಾಚಾರವನ್ನು ಕಿತ್ತೊಗೆಯುವ ಪ್ರಯತ್ನ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಇದು ಕೇವಲ ಸ್ವ ಹಿತಾಸಕ್ತಿಯಿಂದ ಕೂಡಿದೆ. ಸಮಾಜದ ಬಡ ವರ್ಗದ ಜನ ಇನ್ನೂ ಕೂಡ ನೋಟುಗಳ ನಿಷೇಧದಿಂದುಂಟಾದ ಸಂಕಷ್ಟದಿಂದ ಹೊರಬಂದಿಲ್ಲ ಎಂದರು.
ನವೆಂಬರ್ 8ರಂದು ನೋಟು ನಿಷೇಧವಾದ ನಂತರ 50 ದಿನಗಳು ಕಳೆದರೂ ಬಡವರು, ರೈತರು, ಕಾರ್ಮಿಕರು ಮತ್ತು ಕೂಲಿಕಾರರು ಅದರ ಆಘಾತದಿಂದ ಹೊರಬಂದಿಲ್ಲ ಎಂದು ಮಾಯಾವತಿ ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


