ನೋಟು ನಿಷೇಧ ವೈಫಲ್ಯ: 50 ದಿನಗಳ ನಂತರ ಮೋದಿ ರಾಜಿನಾಮೆ ನೀಡುತ್ತಾರಾ?
ಪ್ರಧಾನಿ ನರೇಂದ್ರ ಮೋದಿ ಅವರ ನೋಟು ರದ್ದು ಕ್ರಮದ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಕಿಡಿಕಾರಿದ್ದಾರೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ರದ್ದು ಕ್ರಮದ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಕಿಡಿಕಾರಿದ್ದಾರೆ.
ನೋಟು ನಿಷೇಧ ಕುರಿತು ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದರು. ನೋಟು ನಿಷೇಧದ ಕ್ರಮದಿಂದಾಗಿ ದೇಶದ ಜನರು ಕಳೆದ 50 ದಿನಗಳಲ್ಲಿ ಸುಮಾರು 20 ವರ್ಷಗಳಷ್ಟು ಹಿಂದಕ್ಕೆ ಹೋದಂತಾಗಿದೆ. ದೇಶದಲ್ಲಿ ತುರ್ತುಪರಿಸ್ಥಿತಿಯಲ್ಲ, ಸೂಪರ್ ತುರ್ತುಪರಿಸ್ಥಿತಿ ಇದೆ. ವಿದೇಶದಿಂದ 1 ರುಪಾಯಿ ಕೂಡ ಕಪ್ಪುಹಣ ಭಾರತಕ್ಕೆ ಬಂದಿಲ್ಲ. ಸಮಸ್ಯೆ ಪರಿಹಾರಕ್ಕೆ ಮೋದಿ ಅವರು 50 ದಿನಗಳ ಕಾಲಾವಕಾಶ ಕೇಳಿದ್ದರು. ಆದರೆ 50 ದಿನ ಕಳೆಯುತ್ತಾ ಬಂದರೂ ಇನ್ನು ಸಮಸ್ಯೆ ಪರಿಹಾರವಾಗಿಲ್ಲ ಇದರ ನೈತಿಕ ಹೊಣೆಹೊತ್ತು ಪ್ರಧಾನಿ ಮೋದಿ ರಾಜಿನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದರು.
ನೋಟು ನಿಷೇಧದ ಬಳಿಕ ದೇಶದ ಜನತೆ ತೊಂದರೆ ಅನುಭವಿಸುತ್ತಿದ್ದು ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು. ಮೋದಿ ಅವರ ನಿರ್ಧಾರದಿಂದ ಬಡವರ ಸ್ಥಿತಿ ಹೀನಾಯವಾಗಿದೆ. ಕಪ್ಪುಕುಳಗಳನ್ನು ಹಿಡಿಯಲು ಮತ್ತಷ್ಟು ಕಠಿಣ ಕ್ರಮ ತರುತ್ತಾರಂತೆ. ಈಗಾಗಲೇ ಬಡವರಿಗೆ ಕೊಟ್ಟ ತೊಂದರೆ ಸಾಲದೇ? ಇನ್ನೂ ನೀವು ದೇಶದ ಬಡವರನ್ನು ಕಷ್ಟಕ್ಕೆ ಸಿಲುಕಿಸುತ್ತೀರಿ ಎಂದು ವಾಗ್ದಾಳಿ ನಡೆಸಿದರು.
ಸಭೆಯಲ್ಲಿ ಟಿಎಂಸಿ, ಆರ್ಜಿಡಿ, ಜೆಡಿಎಸ್, ಡಿಎಂಕೆ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


