ದೇಶ

2017 ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಡಿ.30 ರಂದು ಬಿಡುಗಡೆ ಸಾಧ್ಯತೆ

2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಡಿ.30 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

2017 ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿ ಡಿ.30 ರಂದು ಬಿಡುಗಡೆ ಸಾಧ್ಯತೆ
ಚುನಾವಣಾ ಆಯೋಗ
Published On :
ನವದೆಹಲಿ: 2017 ರಲ್ಲಿ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಡಿ.30 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ. 
ಚುನಾವಣಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ಡಿ.30 ರಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದ್ದು, ಅಂದೇ ವೇಳಾಪಟ್ಟಿ ಘೋಷಣೆಯಾಗುವ ನಿರೀಕ್ಷೆ ಇದೆ. ಉತ್ತರ ಪ್ರದೇಶ ರಾಜ್ಯದ ಚುನಾವಣೆಯನ್ನು 7 
ಹಂತಗಳಲ್ಲಿ ನಡೆಸಲು ಚುನಾವಣಾ ಆಯೋಗ ಉದ್ದೇಶಿಸಿದ್ದು ಉಳಿದ 4 ರಾಜ್ಯಗಳ ಚುನಾವಣೆ ಒಂದೇ ಹಂತದಲ್ಲಿ ನಡೆಸುವ ಸಾಧ್ಯತೆ ಇದೆ. ಬೋರ್ಡ್ ಪರೀಕ್ಷೆಗಳಿಗೂ ಮುನ್ನ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಪಶ್ಚಿಮ ಉತ್ತರ ಪ್ರದೇಶದಿಂದ ಮೊದಲ ಹಂತದ ಚುನಾವಣೆ ಪ್ರಾರಂಭವಾಗಲಿದೆ ಎಂದು ಹೇಳಲಾಗುತ್ತಿದೆ.  
ಪಂಜಾಬ್, ಗೋವಾ, ಮಣಿಪುರ ವಿಧಾನಸಭೆಗಳ ಅವಧಿ ಮಾರ್ಚ್ 18 ರ ವರೆಗೆ ಇದ್ದರೆ, ಉತ್ತರಾಖಂಡ್ ವಿಧಾನಸಭೆಯ ಅವಧಿ ಮಾ.26 ರ ವರೆಗೆ ಇದೆ. ವೇಳಾಪಟ್ಟಿ ಘೋಷಣೆಗೂ ಮುನ್ನ ಡಿ.27 ರಂದು ಕೇಂದ್ರ ಚುನಾವಣಾ ಆಯೋಗ ಭದ್ರತಾ ವ್ಯವಸ್ಥೆ ಬಗ್ಗೆ ಸಭೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.