ದೇಶ

ಉ.ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿ ಸ್ಪರ್ಧೆ, 325 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ 'ಮಹಾಗತಬಂಧನ್' ರಚನೆಯಾಗುತ್ತೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿರುವ...

ಉ.ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿ ಸ್ಪರ್ಧೆ, 325 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮುಲಾಯಂ ಸಿಂಗ್ ಯಾದವ್
Published On :
ಲಖನೌ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ 'ಮಹಾಗತಬಂಧನ್' ರಚನೆಯಾಗುತ್ತೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು, ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ತಮ್ಮ ಪಕ್ಷದ 325 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮುಲಾಯಂ, ಸಮಾಜವಾದಿ ಪಕ್ಷ ಯಾವುದೇ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.
175 ಹಾಲಿ ಶಾಸಕರು ಸೇರಿದಂತೆ ಒಟ್ಟು 325 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಮುಲಾಯಂ, ಉಳಿದ 78 ಅಭ್ಯರ್ಥಿಗಳ ಪಟ್ಟಿಯನ್ನು ನಂತರ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಅಚ್ಚರಿ ಎಂದರೆ, ಮುಲಾಯಂ ಸಿಂಗ್ ಅವರು ತಮ್ಮ ಸಹೋದರ ಹಾಗೂ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರೊಂದಿಗೆ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮುಲಾಯಂ ಪುತ್ರ, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಗೈರು ಆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.