ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಗೂಗಲ್ ಸಿಇಒ ಸುಂದರ್ ಪಿಚ್ಚೈ
ಜನವರಿಯಲ್ಲಿ ಗೂಗಲ್ ಸಂಸ್ಥೆಯ ಸಿಇಒ ಸುಂದರ್ ಪಿಚ್ಚೈ ಭಾರತಕ್ಕೆ ಭೇಟಿ ನೀಡಲಿದ್ದಾರೆ.

Published On :
ಕೋಲ್ಕತ್ತಾ: ಜನವರಿಯಲ್ಲಿ ಗೂಗಲ್ ಸಂಸ್ಥೆಯ ಸಿಇಒ ಸುಂದರ್ ಪಿಚ್ಚೈ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಐಐಟಿ ಖರಗ್ ಪುರದ ಹಳೆಯ ವಿದ್ಯಾರ್ಥಿಯಾಗಿರುವ ಗೂಗಲ್ ಸಿಇಒ ಸುಂದರ್ ಪಿಚ್ಚೈ ಭಾರತ ಭೇಟಿಯ ವೇಳೆ ಖರಗ್ ಪುರ ಐಐಟಿಗೂ ಭೇಟಿ ನೀಡಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಜನವರಿ ಮೊದಲ ವಾರದಲ್ಲಿ ಖರಗ್ ಪುರ ಐಐಟಿಗೆ ಭೇಟಿ ನೀಡಲು ಸುಂದರ್ ಪಿಚ್ಚೈ ಅವರೇ ಸ್ವತಃ ಇಚ್ಛಿಸಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕ ಪಿಪಿ ಚಕ್ರವರ್ತಿ ಅಧಿಕೃತ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ 2015 ರ ಡಿಸೆಂಬರ್ 15ರಂದೂ ಸುಂದರ್ ಪಿಚ್ಚೈ ಭಾರತಕ್ಕೆ ಭೇಟಿ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


