ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಶಸಿಕಲಾ ಅವಿರೋಧ ಆಯ್ಕೆ
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಕೆ ಶಸಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತೆರವಾಗಿದ್ದ ಪ್ರಧಾನ ..

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ವಿಕೆ ಶಸಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಯಲಲಿತಾ ಅವರ ನಿಧನದ ನಂತರ ತೆರವಾಗಿದ್ದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ, ಅವರ ಆಪ್ತೆಯಾಗಿದ್ದ ಶಸಿಕಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಂದು ಬೆಳಗ್ಗೆ ಪಕ್ಷದ ಸ್ಥಾಯಿ ಸಮಿತಿ ಅಧ್ಯಕ್ಷ ಇ-ಮಧುಸೂದನ್ ಮತ್ತು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಮಂಡಳಿ ಸಭೆಯಲ್ಲಿ ನಿರ್ಣಯ ಪಾಸು ಮಾಡಲಾಗಿದೆ.
ಕಳೆದ 33 ವರ್ಷಗಳಿಂದ ಜಯಲಲಿತಾ ಅವರ ಜೊತೆಯಲ್ಲಿಯೇ ಇದ್ದ ಶಸಿಕಲಾರಿಗೆ ಬಹು ದೊಡ್ಡ ಅನುಭವವಿದೆ, ಹೀಗಾಗಿ ಪಕ್ಷದ ಎಲ್ಲಾ ವ್ಯವಹಾರಗಳನ್ನು ನಿಭಾಯಿಸುತ್ತಾರೆ ಎಂದು ಪಕ್ಷದ ಮಂಡಳಿ ಸಭೆಯಲ್ಲಿ ಅಭಿಪ್ರಾಯ ಮೂಡಿದೆ.
ಎಂಜಿಆರ್ ನಿಧನದ ನಂತರ ಜಯಲಲಿತಾ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಈಗ ಜಯಲಲಿತಾ ಅವರ ಎಲ್ಲಾ ಜವಾಬ್ದಾರಿಗಳನ್ನು ಚಿನ್ನಮ್ಮ ಶಸಿಕಲಾ ನಿರ್ವಹಿಸುತ್ತಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.
ಪಕ್ಷದ ಪ್ರಧಾನ ಮಂಡಳಿ ಸಭೆಯ ನಂತರ, ಎಐಎಡಿಎಂಕೆ ಹಿರಿಯ ನಾಯಕರು ಶಸಿಕಲಾ ಅವರನ್ನು ಪೋಯಸ್ ಗಾರ್ಡನ್ ನಲ್ಲಿ ಭೇಟಿಯಾಗಿ ನಿರ್ಣಯದ ಪ್ರತಿಯನ್ನು ಹಸ್ತಾಂತರಿಸಿದರು. ಇನ್ನೂ ಜಯಲಲಿತಾ ಅವರಿಗೆ ಮ್ಯಾಗಸ್ಸೇ ಪ್ರಶಸ್ತಿ ಮತ್ತು ನೊಬೆಲ್ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಣಯ ಅಂಗೀಕರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


