ದೇಶ

ಎಸ್ಪಿಯಲ್ಲಿ ಮತ್ತೆ ಭಿನ್ನಮತ; ತಂದೆ ವಿರುದ್ಧ ತಿರುಗಿಬಿದ್ದ ಅಖಿಲೇಶ್ ರಿಂದ 167 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಉತ್ತರ ಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ತಂದೆ ಮುಲಾಯಂ ಸಿಂಗ್ ಯಾದವ್....

ಎಸ್ಪಿಯಲ್ಲಿ ಮತ್ತೆ ಭಿನ್ನಮತ; ತಂದೆ ವಿರುದ್ಧ ತಿರುಗಿಬಿದ್ದ ಅಖಿಲೇಶ್ ರಿಂದ 167 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಖಿಲೇಶ್ ಯಾದವ್
Published On :
ಲಖನೌ: ಉತ್ತರ ಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ತಂದೆ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧವೇ ತಿರುಗಿ ಬಿದ್ದಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮುಂಬರುವ ವಿಧಾನಸಭೆ ಚುನಾವಣೆಗಾಗಿ ತಮ್ಮ ಬೆಂಬಲಿಗರನ್ನೊಳಗೊಂಡ 167 ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ.
ಪಕ್ಷದ ಮುಖ್ಯಸ್ಥ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ತಮ್ಮೊಂದಿಗೆ ಚರ್ಚಿಸಿದೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ ಅಖಿಲೇಶ್ ಯಾದವ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ತಂದೆಗೆ ತಿರುಗೇಟು ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರು ಇಂದು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಹಾಗೂ ಚಿಕ್ಕಪ್ಪ ಶಿವಪಾಲ್ ಯಾದವ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದ ನಂತರ 167 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದು, ಈ ಮೂಲಕ ತಾವು ಪಕ್ಷದ ಬೆಂಬಲದೊಂದಿಗೆ ಅಥವಾ ಪಕ್ಷದ ಬೆಂಬಲ ಇಲ್ಲದೆಯೂ ಚುನಾವಣೆ ಎದುರಿಸಲು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.
ನಿನ್ನೆಯಷ್ಟೇ ಮುಲಾಯಂ ಸಿಂಗ್ ಯಾದವ್ ಅವರು ಸಮಾಜವಾದಿ ಪಕ್ಷದ 325 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರು. ಅಲ್ಲದೆ ನಂತರ ಇನ್ನೂ 78 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಈ ವೇಳೆ ಅಖಿಲೇಶ್ ಯಾದವ್ ಅವರು ಗೈರು ಆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.