ಪಂಜಾಬ್ ಚುನಾವಣೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಿಂದ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಗುರುವಾರ...

Published On :
ಚಂಡೀಗಢ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪಂಜಾಬ್ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಗುರುವಾರ ಒಪ್ಪಿಕೊಂಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಆಶಾ ಕುಮಾರಿ ಹಾಗೂ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಇಂದು ದೆಹಲಿಯಲ್ಲಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ಪಕ್ಷದ ಪ್ರಣಾಳಿಕೆ ಬಿಡುಗಡೆ ಬಗ್ಗೆ ಚರ್ಚಿಸಿದರು.
ಸಿಂಗ್ ಭೇಟಿ ಬಳಿಕ ಮಾತನಾಡಿದ ಆಶಾ ಕುಮಾರಿ ಅವರು, ಪ್ರಣಾಳಿಕೆ ಸಿದ್ಧಪಡಿಸುವ ಮುನ್ನ ಆರ್ಥಿಕ ತಜ್ಞರೂ ಆಗಿರುವ ಮನಮೋಹನ್ ಸಿಂಗ್ ಅವರ ಸಲಹೆ ಪಡೆಯಲು ಪಕ್ಷ ನಿರ್ಧರಿಸಿದೆ. ಪಂಜಾಬ್ ಮಾಜಿ ಹಣಕಾಸು ಸಚಿವ ಮನಪ್ರಿತ್ ಬಾದಲ್ ಅವರ ನೇತೃತ್ವದ ಸಮಿತಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


