ದೇಶ

ಜನವರಿ 1ಕ್ಕೆ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ನಿಶ್ಚಿತಾರ್ಥ ಸಾಧ್ಯತೆ

ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಬಹುದಿನಗಳ ಗೆಳತಿ, ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಅವರೊಂದಿಗೆ ಹೊಸವರ್ಷದಂದು ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ವದಂತಿ...

ಜನವರಿ 1ಕ್ಕೆ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ನಿಶ್ಚಿತಾರ್ಥ ಸಾಧ್ಯತೆ
ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ
Published On :
ಡೆಹ್ರಾಡೂನ್: ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಅವರು ಬಹುದಿನಗಳ ಗೆಳತಿ, ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಅವರೊಂದಿಗೆ ಹೊಸವರ್ಷದಂದು ನಿಶ್ಚಿತಾರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ವದಂತಿ ಅಂತರಜಾಲದಲ್ಲಿ ಹರಿದಾಡುತ್ತಿದೆ.
ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಇಬ್ಬರೂ ಒಟ್ಟಿಗೆ 2017 ಅನ್ನು ಬರಮಾಡಿಕೊಳ್ಳಲು ಡೆಹ್ರಾಡೂನ್ ಆಗಮಿಸಿದ್ದು, ಹೊಸ ವರ್ಷದಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಅಲ್ಲದೆ ಈ ತಾರಾ ಜೋಡಿಯ ನಿಶ್ಚಿತಾರ್ಥಕ್ಕೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್, ಅಂಬಾನಿ ಕುಟುಂಬ ಹಾಗೂ ಕ್ರಿಕೆಟರ್ ಗಳು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದೆ.
ಸದ್ಯ ಡೆಹ್ರಾಡೂನ್ ನ ನರೇಂದ್ರ ನಗರದಲ್ಲಿರುವ ಆನಂದ್ ಹೋಟೆಲ್  ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ಅವರ ಸ್ನೇಹಿತರು ಮತ್ತು ಕಟುಂಬದವರು ತಂಗಿದ್ದು, ಇದೇ ಹೋಟೆಲ್ ನಲ್ಲೇ ನಿಶ್ಚಿತಾರ್ಥ ನಡೆಯಲಿದೆ ಎಂದು ವರದಿ ವಿವರಿಸಿದೆ.
ಲೈವ್ ಹಿಂದೂಸ್ತಾನ್.ಕಾಂ ವರದಿಯ ಪ್ರಕಾರ, ಡೆಹ್ರಾಡೂನ್ ನಲ್ಲಿ ವಿರಾಮದಲ್ಲಿರುವ ಈ ಇಬ್ಬರು ಪ್ರೇಮಿಗಳು ಗೌಪ್ಯವಾಗಿ ನಿಶ್ಚಿತಾರ್ಥ ಶಾಸ್ತ್ರ ಮುಗಿಸಿಕೊಂಡಿದ್ದು, ಜನವರಿ 1ರಂದು ಅಧಿಕೃತವಾಗಿ ನಿಶ್ಚಿತಾರ್ಥ ಸಮಾರಂಭ ನಡೆಯಲಿದೆ ಎಂದು ಹೇಳಿದೆ.
ಇನ್ನು ಉತ್ತರಾಖಂಡ್ ರಾಜ್ಯದ ರಾಯಭಾರಿಯಾಗಿರುವ ವಿರಾಟ್ ಕೊಹ್ಲಿ ಅವರನ್ನು ಉತ್ತರಾಖಂಡ್ ಸಿಎಂ ಹರೀಶ್ ರಾವತ್ ಕೂಡಾ ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.