ದೇಶ

ಲಕ್ನೋ: ಖಿನ್ನತೆಯಿಂದ ಬಳಲುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ನೇಣಿಗೆ ಶರಣು

ಹಿರಿಯ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ..

ಲಕ್ನೋ: ಖಿನ್ನತೆಯಿಂದ ಬಳಲುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ನೇಣಿಗೆ ಶರಣು
ಸಾಂದರ್ಭಿಕ ಚಿತ್ರ
Published On :

ಲಕ್ನೋ: ಹಿರಿಯ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

1987ರ ಬ್ಯಾಚ್ ನ ಅಧಿಕಾರಿಯಾಗಿದ್ದ ಸಂಜಯ್ ದುಬೆ ಆತ್ಮಹತ್ಯೆಗೆ ಶರಣಾದವರು. ಗೃಹ ರಕ್ಷಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ದುಬೈ ತಮ್ಮ ಗೌತಂಪಳ್ಳಿಯಮ ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಸಂಜಯ್ ದುಬೆ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ,

ಕಳೆದ ಕೆಲವು ತಿಂಗಳಿಂದ ಸಂಜಯ್ ದುಬೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ಪತ್ನಿ ಮತ್ತು ಮಗಳು ಗುರಂಗಾವ್ ನಲ್ಲಿ ವಾಸಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.