ಚಿಟ್ ಫಂಡ್ ಹಗರಣ: ಸಿಬಿಐನಿಂದ ಟಿಎಂಸಿ ಸಂಸದ ತಪಸ್ ಪಾಲ್ ಬಂಧನ
7 ಸಾವಿರ ಕೋಟಿ ರುಪಾಯಿಯ ಪೊಂಜಿ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತೃಣಮೂಲ...

Published On :
ಕೋಲ್ಕತಾ: 17 ಸಾವಿರ ಕೋಟಿ ರುಪಾಯಿಯ ಪೊಂಜಿ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ತಪಸ್ ಪಾಲ್ ಅವರನ್ನು ಶುಕ್ರವಾರ ಸಿಬಿಐ ಬಂಧಿಸಿದೆ.
ಚಿಂಟ್ ಫಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರೀಯ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿದ್ದ ತಪಸ್ ಪಾಲ್ ಅವರು, ಭಿನ್ನವಾದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ಶಾರದ ಚಿಂಟ್ ಫಂಡ್ ಹಾಗೂ ರೋಸ್ ವ್ಯಾಲಿ ಚಿಂಟ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಸಂಸದ ತಪಸ್ ಪಾಲ್ ಹಾಗೂ ಮತ್ತೋರ್ವ ಸಂಸದನಿಗೆ ಡಿಸೆಂಬರ್ 30ರೊಳಗೆ ವಿಚಾರಣಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು.
ಬೆಂಗಾಳಿ ನಟ ತಪಸ್ ಪಾಲ್ ಅವರು ಈ ಹಿಂದೆ ಪ್ರತಿಪಕ್ಷದ ಮಹಿಳಾ ಕಾರ್ಯಕರ್ತರನ್ನು ರೇಪ್ ಮಾಡಲು ತನ್ನ ಹುಡುಗರನ್ನು ಕಳುಹಿಸುವುದಾಗಿ ವಿವಾದಾತ್ಮ ಹೇಳಿಕೆ ನೀಡಿ ಸುದ್ದಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


