ಎಸ್ ಪಿ ಬಿಕ್ಕಟ್ಟು: ಮುಲಾಯಂ ಸಿಂಗ್ ಭೇಟಿ ಮಾಡಿದ ಅಖಿಲೇಶ್ ಯಾದವ್, ಅಜಂ ಖಾನ್
ಅಖಿಲೇಶ್ ಯಾದವ್ ಡಿ.31 ರಂದು ಬೆಳಿಗ್ಗೆ ಬೆಂಬಲಿಗರ ಸಭೆ ನಡೆಸಿದ್ದು, ಸಭೆಯಲ್ಲಿ ಒಟ್ಟು 207 ಶಾಸಕರು, 53 ಅಭ್ಯರ್ಥಿಗಳು 37 ಎಂಎಲ್ ಸಿಗಳು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

Published On :
ಲಖನೌ: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ತಮ್ಮನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿದ ನಂತರ ಅಖಿಲೇಶ್ ಯಾದವ್ ಡಿ.31 ರಂದು ಬೆಳಿಗ್ಗೆ ಬೆಂಬಲಿಗರ ಸಭೆ ನಡೆಸಿದ್ದು, ಸಭೆಯಲ್ಲಿ ಒಟ್ಟು 207 ಶಾಸಕರು, 53 ಅಭ್ಯರ್ಥಿಗಳು(ವಿಧಾಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು) 37 ಎಂಎಲ್ ಸಿಗಳು ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
ಅಖಿಲೇಶ್ ಯಾದವ್ ಅವರನ್ನು ಮುಲಾಯಂ ಸಿಂಗ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ ಉತ್ತರ ಪ್ರದೇಶದಲ್ಲಿ ಹಲವು ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಅಖಿಲೇಶ್ ಯಾದವ್ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಚಿಂತನೆಯಲ್ಲಿದ್ದಾರೆ ಎಂಬ ವರದಿಗಳೂ ಪ್ರಕಟವಾಗಿವೆ.
ಈ ನಡುವೆ ಸಮಾಜವಾದಿ ಪಕ್ಷದ ಹಿರಿಯ ನಾಯಕನಾಗಿರುವ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಜೊತೆ ಸುಮಾರು ಒಂದು ಗಂಟೆ ಚರ್ಚೆ ನಡೆಸಿದ್ದು, ಬಳಿಕ ಅಖಿಲೇಶ್ ಯಾದವ್ ಅವರ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಅಖಿಲೇಶ್ ಯಾದವ್ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ನಿವಾಸಕ್ಕೆ ತೆರಳಿದ್ದು ಮಹತ್ವದ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮುಲಾಯಂ ಸಿಂಗ್ ಯಾದವ್Mulayam Singh YadavUttar pradeshಉತ್ತರ ಪ್ರದೇಶAkhilesh Yadavಅಖಿಲೇಶ್ ಯಾದವ್Samajwadi Party Crisisಸಮಾಜವಾದಿ ಪಕ್ಷ ಬಿಕ್ಕಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


