ದೆಹಲಿ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗದಿಂದ ಸಮನ್ಸ್
ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ...

Published On :
ನವದೆಹಲಿ: ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಮಾಹಿತಿ ಒದಗಿಸದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿ ಮಾಡಿರುವ ದೆಹಲಿ ಮಹಿಳಾ ಆಯೋಗ, ಮುಂದಿನ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ದೆಹಲಿ ಮಹಿಳಾ ಆಯೋಗ ನ್ಯಾಯಾಂಗ ಅಧಿಕಾರವನ್ನು ಹೊಂದಿದ್ದು, ಫೆಬ್ರವರಿ 8 ರಂದು ದೆಹಲಿ ಮಹಿಳಾ ಆಯೋಗದ ಮುಂದೆ ಹಾಜರಾಗಿ ಮಾಹಿತಿ ಒದಗಿಸದಿರುವ ಸಂಬಂಧ ವಿವರಣೆ ನೀಡುವಂತೆ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್.ಬಸ್ಸಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿ ಪೊಲೀಸ್ ಕಮಿಷನರ್ಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ನೀಡುವಂತೆ ಕೇಳಲಾಗಿತ್ತು. ಈ ಸಂಬಂಧ ಸಾಕಷ್ಟು ಬಾರಿ ಪತ್ರ ಸಹ ಬರೆಯಲಾಗಿತ್ತು. ಆದರೆ ದೆಹಲಿ ಪೊಲೀಸರು ಮಹತ್ವದ ಮಾಹಿತಿ ನೀಡಲಿಲ್ಲ.
ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಯೋಜನೆ ರೂಪಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬಸ್ಸಿ ಅವರಿಗೆ ಸಮನ್ಸ್ ನೀಡಿದ್ದೇವೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲೀವಲ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


