ಚಾರ್ಜಿಂಗ್ ಹಾಕಿ ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟ; ಬಾಲಕನ ಕಣ್ಣಿಗೆ ತೀವ್ರ ಹಾನಿ
ಮೊಬೈಲ್ ದುರಂತದ ಸರಣಿ ಮತ್ತೆ ಮುಂದುವರೆದಿದ್ದು, ಚಾರ್ಜಿಂಗ್ ಗೆ ಹಾಕಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕನ ಕಣ್ಣಿಗ ಗಂಭೀರ ಹಾನಿಯಾಗಿದೆ...

ಚೆನ್ನೈ: ಮೊಬೈಲ್ ದುರಂತದ ಸರಣಿ ಮತ್ತೆ ಮುಂದುವರೆದಿದ್ದು, ಚಾರ್ಜಿಂಗ್ ಗೆ ಹಾಕಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕನ ಕಣ್ಣಿಗ ಗಂಭೀರ ಹಾನಿಯಾಗಿದೆ.
ಚೆನ್ನೈನಿಂದ ಸುಮಾರು 86 ಕಿ.ಮೀ ದೂರದಲ್ಲಿರುವ ಮಧುರಂಟಕಂ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸ್ಫೋಟದಲ್ಲಿ 9 ವರ್ಷದ ಬಾಲಕ ಧುನುಷ್ ಎಂಬ ಬಾಲಕನ ಕಣ್ಣಿಗೆ ಗಂಭೀರವಾಗಿ ಗಾಯವಾಗಿದೆ. ಮನೆಯಲ್ಲಿ ಚಾರ್ಜಿಂಗ್ ಹಾಕಿದ್ದ ವೇಳೆ ಕರೆ ಬಂದಿದ್ದು, ಆತುರದಲ್ಲಿ ಚಾರ್ಜಿಂಗ್ ಪಿನ್ ತೆಗೆಯದೇ ಧುನುಷ್ ಮಾತನಾಡುತ್ತಿದ್ದ. ಈ ವೇಳೆ ಮೊಬೈಲ್ ಸ್ಫೋಟಗೊಂಡಿದ್ದು, ಆತನ ಕಣ್ಣಿಗೆ ಗಂಭೀರ ಹಾನಿಯಾಗಿದೆ.
ಇದಲ್ಲದೆ ದೇಹದ ಇತರೆ ಭಾಗಗಳಿಗೆ ಗಾಯವಾಗಿದ್ದು, ಮೊಬೈಲ್ ಹಿಡಿದಿದ್ದ ಎಡಗೈಗೂ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಧುನುಷ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು. 3 ವಾರಗಳ ಕಾಲ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


