ಆದರ್ಶ ಹಗರಣ: ಮಹಾ ಮಾಜಿ ಸಿಎಂ ಚವಾಣ್ ವಿರುದ್ಧ ತನಿಖೆಗೆ ರಾಜ್ಯಪಾಲರ ಒಪ್ಪಿಗೆ
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಬಹುಕೋಟಿ ಆದರ್ಶ ಗೃಹ ನಿರ್ಮಾಣ...

Published On :
ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಬಹುಕೋಟಿ ಆದರ್ಶ ಗೃಹ ನಿರ್ಮಾಣ ಹಗರಣಕ್ಕೆ ಸಂಬಂಧಿಸಿದಂತೆ ಚವಾಣ್ ವಿರುದ್ಧ ಸಿಬಿಐ ತನಿಖೆ ನಡೆಸಲು ಮಹಾರಾಷ್ಟ್ರ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ ಅವರು ಗುರುವಾರ ಒಪ್ಪಿಗೆ ನೀಡಿದ್ದಾರೆ.
ಆದರ್ಶ ಹಗರಣ ಸಂಬಂಧ ಅಶೋಕ್ ಚವಾಣ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಬೇಕೆಂದು ಕೋರಿ ಸಿಬಿಐ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಅನುಮತಿ ಪಡೆದ ರಾಜ್ಯಪಾಲರು ಚವಾಣ್ ವಿರುದ್ಧ ತನಿಖೆ ನಡೆಸಲು ಸಿಬಿಐ ಅಧಿಕಾರಿಗಳಿಗೆ ಒಪ್ಪಿಗೆ ನೀಡಿದ್ದಾರೆ.
ಸೆಕ್ಷನ್ 197 ಸಿಆರ್ ಪಿಸಿ ಅಡಿ ಚಾವಾಣ್ ವಿರುದ್ಧ ಪ್ರಕರಣ(ಪ್ರಾಸಿಕ್ಯೂಷನ್) ದಾಖಲಿಸಲು ಅನುಮತಿ ನೀಡುವಂತೆ ಮುಂಬೈ ಸಿಬಿಐ ಜಂಟಿ ನಿರ್ದೇಶಕರು ಅಕ್ಟೋಬರ್ 8, 2015ರಂದು ಪತ್ರ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


