ದೇಶ

ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಗುರ್ಪೀತ್

ಅತ್ತೆ-ಮಾವನಿಂದ ಹಿಂಸೆಗೊಳಪಟ್ಟು ಜರ್ಮನಿಯ ನಿರಾಶ್ರಿತರ ಶಿಬಿರದಲ್ಲಿ ಕೂಡಿ ಹಾಕಲ್ಪಟ್ಟಿದ್ದ ಭಾರತೀಯ ಮೂಲದ ಮಹಿಳೆ...

ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಗುರ್ಪೀತ್
ಮಾಧ್ಯಮದವರೊಂದಿಗೆ ಮಾತನಾಡುತ್ತಿರುವ ಗುರ್ಪೀತ್
Published On :

ನವದೆಹಲಿ: ಅತ್ತೆ-ಮಾವನಿಂದ ಹಿಂಸೆಗೊಳಪಟ್ಟು ಜರ್ಮನಿಯ ನಿರಾಶ್ರಿತರ ಶಿಬಿರದಲ್ಲಿ ಕೂಡಿ ಹಾಕಲ್ಪಟ್ಟಿದ್ದ ಭಾರತೀಯ ಮೂಲದ ಮಹಿಳೆ ಗುರ್ಪೀತ್ ಮತ್ತು ಆಕೆಯ ಎಂಟು ವರ್ಷದ ಮಗಳು ಗುರುವಾರ ಸುರಕ್ಷಿತವಾಗಿ ಭಾರತಕ್ಕೆ ವಾಪಾಸಾಗಿದ್ದಾರೆ.

ದೆಹಲಿಗೆ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗುರ್ಪೀತ್, ತಾವು ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಲು ಸಹಾಯ ಮಾಡಿದ ಭಾರತ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಮೊನ್ನೆ 2ನೇ ತಾರೀಖಿನಂದು ತಮ್ಮನ್ನು ಸ್ವದೇಶಕ್ಕೆ ಕರೆಸಲು ಭಾರತ ಸರ್ಕಾರದ ಸಹಾಯ ಕೇಳಿ ಹಿಂದಿ ಭಾಷೆಯಲ್ಲಿ ವಿಡಿಯೋವೊಂದನ್ನು ಗುರ್ಪೀತ್ ಇಂಟರ್ನೆಟ್ ನಲ್ಲಿ ಪೋಸ್ಟ್ ಮಾಡಿದ್ದರು.ಇದನ್ನು ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೂಡಲೇ ಕ್ರಮ ತೆಗೆದುಕೊಂಡು ಗುರ್ಪೀತ್ ಅವರನ್ನು ರಕ್ಷಿಸಿ ಭಾರತಕ್ಕೆ ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗುರ್ಪೀತ್ ಅವರ ತಂದೆಯನ್ನು ಮೊನ್ನೆ ಮಂಗಳವಾರ ಸಂಪರ್ಕಿಸಿದ ಸಚಿವೆ ಸುಷ್ಮಾ ಸ್ವರಾಜ್, ಜರ್ಮನಿಯಲ್ಲಿರುವ ಭಾರತೀಯ ದೂತವಾಸ ಕಚೇರಿಯಿಂದ ಎಲ್ಲ ಮಾಹಿತಿ ಪಡೆದುಕೊಂಡಿದ್ದರು.ಅವರನ್ನು ಭಾರತಕ್ಕೆ ಕರೆತರುವಲ್ಲಿ ಶ್ರಮಿಸಿದ ಅಧಿಕಾರಿಗಳನ್ನು ಸುಷ್ಮಾ ಸ್ವರಾಜ್ ಅಭಿನಂದಿಸಿದ್ದಾರೆ.ಗುರ್ಪೀತ್ ಹರ್ಯಾಣ ರಾಜ್ಯದ ಫರಿದಾಬಾದ್ ನವರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.