ದೇಶ

ಮತ್ತದೇ ಹಳೇರಾಗ: ದಾವೂದ್ ನಮ್ಮ ದೇಶದಲ್ಲಿಲ್ಲ ಎಂದ ಪಾಕ್

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ. ದಾವುದ್ ಎಲ್ಲಿದ್ದಾನೆ ಎನ್ನುವುದು ತಿಳಿದಿಲ್ಲ ಎನ್ನುವುದನ್ನು ಭಾರತದ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ...

ಮತ್ತದೇ ಹಳೇರಾಗ: ದಾವೂದ್ ನಮ್ಮ ದೇಶದಲ್ಲಿಲ್ಲ ಎಂದ ಪಾಕ್
ದಾವೂದೇ ಇಬ್ರಾಹಿಂ
Published On :

ನವದೆಹಲಿ:  ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿಲ್ಲ. ದಾವುದ್ ಎಲ್ಲಿದ್ದಾನೆ ಎನ್ನುವುದು ತಿಳಿದಿಲ್ಲ ಎನ್ನುವುದನ್ನು ಭಾರತದ ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿಕೆ ನೀಡಿದೆ.

1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವುದ್ ಇಬ್ರಾಹಿಂ, ಸರಣಿ ಸ್ಫೋಟದ ನಂತರ ಭಾರತದಿಂದ ಪರಾರಿಯಾಗಿ ಪಾಕಿಸ್ತಾನದಲ್ಲಿ ನೆಲೆಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ದಾವೂದ್ ಇಬ್ರಾಹಿಂ ವಿರುದ್ಧ ಇಂಟರ್‌ಪೋಲ್ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ, ಇಂಗ್ಲೆಂಡ್‌ನಲ್ಲಿರುವ ದಾವೂದ್ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಹಲವಾರು ಖಾತೆಗಳನ್ನು ವಶಕ್ಕೆ ತೆಗೆದುಕೊಂಡು ಆರ್ಥಿಕ ನಿರ್ಭಂಧ ಹೇರಲಾಗಿದೆ.

ಮುಂಬೈ ಮೂಲದ ಗ್ಯಾಂಗ್‌ಸ್ಟರ್ ದಾವೂದ್, ಪಾಸ್‌ಪೋರ್ಟ್‌ನಲ್ಲಿ ಭಾರತೀಯ ನಾಗರಿಕ ಎಂದು ನಮೂದಿಸಿದ್ದಾನೆ ಎನ್ನಲಾಗಿದೆ. ಪಾಕಿಸ್ತಾನದ ಪಾಸ್‌ಪೋರ್ಟ್‌ಗಳಲ್ಲಿ ಪಾಕ್ ನಾಗರಿಕ ಎಂದು ನಮೂದಿಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.